ಬಿಹಾರ ಚುನಾವಣೆ ಹೆಸರಲ್ಲಿ ಅಧಿಕಾರಿಗಳ ಮೂಲಕ ಸಚಿವರು ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಸಂಸದ ಬಿ.ವೈ. ರಾಘವೇಂದ್ರ ಅವರ ಆರೋಪಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಕರ್ನಾಟಕದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾಡಿದ ಕೀರ್ತಿ ಬಿಜೆಪಿಯದ್ದೇ ಹೊರತು ಕಾಂಗ್ರೆಸ್ಸಿನದ್ದಲ್ಲ ಎಂದು ಹೇಳಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿರುವ ಪ್ರಿಯಾಂಕ್ ಖರ್ಗೆ, ಯಡಿಯೂರಪ್ಪ ಮತ್ತು ದಿವಂಗತ ಅನಂತ್ ಕುಮಾರ್ ಅವರ ಸಂಭಾಷಣೆಯಲ್ಲಿ ಬಿಜೆಪಿ ಹೈಕಮಾಂಡಿಗೆ 1,800 ಕೋಟಿ ರೂಪಾಯಿ ಕಪ್ಪ ನೀಡಿದ್ದ ವಿಚಾರ ಬಹಿರಂಗವಾಗಿತ್ತು. ರಾಜ್ಯ ಬಿಜೆಪಿ ನಾಯಕರು ಅದನ್ನು ಮರೆತಿದ್ದಾರೆಯೇ? ಮರೆತಿದ್ದರೆ, ನಾವು ಮತ್ತೆ ನೆನಪಿಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಸಂಸದ ಬಿ.ವೈ. ರಾಘವೇಂದ್ರ ತಮ್ಮ ತಂದೆಯ ಮಾತುಗಳನ್ನು ಒಮ್ಮೆ ಕಿವಿಗೊಟ್ಟು ಕೇಳಿಕೊಂಡು ನಂತರ ಮಾತನಾಡಿದರೆ ಒಳಿತು. ಮುಖ್ಯಮಂತ್ರಿ ಹುದ್ದೆಗೆ 2,500 ಕೋಟಿ ರೂ., ಮಂತ್ರಿಗಿರಿಗೆ 60-70 ಕೋಟಿ ರೂ. ನೀಡಬೇಕು ಎಂದು ಹೇಳಿದ್ದವರೇ ಬಿಜೆಪಿಯವರು. ಹುದ್ದೆಗಳನ್ನು ಮಾರಾಟಕ್ಕಿಟ್ಟು ವ್ಯಾಪಾರ ಮಾಡಿದ ಪಕ್ಷ ಬಿಜೆಪಿ, ಕಾಂಗ್ರೆಸ್ ಅಲ್ಲ ಎಂದು ಖರ್ಗೆ ಕಿಡಿಕಾರಿದ್ದಾರೆ.
ವರದಿ: ರಂಜಿತ ರೇವಣ್ಣ ನಾಟನಹಳ್ಳಿ