ಮಂಡ್ಯ :- ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಶೇಕಡ 60 ರಷ್ಟು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮನ್ ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ಅವರನ್ನು ಪಕ್ಷದ ಅಭ್ಯರ್ಥಿಯಾಗಿ ಮಾಡುವುದಾಗಿ ಕಂದಾಯ ಸಚಿವ ಆರ್.ಅಶೋಕ್ ಸೂಚ್ಯವಾಗಿ ಹೇಳಿದರು.
ಮದ್ದೂರು ಪಟ್ಟಣದ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಬುಧವಾರ ಹಮ್ಮಿಕೊಂಡಿದ್ದ ಗ್ರಾಮ ಸ್ವರಾಜ್ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ಮನ್ ಮುಲ್ ನಿರ್ದೇಶಕ ಎಸ್.ಪಿ. ಸ್ವಾಮಿ ಈಗಾಗಲೇ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಕೇವಲ ಸಂಘಟನೆ ಮಾತ್ರವಲ್ಲದೆ ಮುಂದಿನ ಗ್ರಾಮ ಪಂಚಾಯಿತಿ , ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಶ್ರಮಿಸಬೇಕು ಈ ಎಲ್ಲಾ ಚುನಾವಣೆಯಲ್ಲಿ ಶೇ 60 ರಷ್ಟು ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದಲ್ಲಿ ಅವರನ್ನೆ ಮದ್ದೂರು ವಿಧಾನಸಭಾ ಕ್ಷೇತ್ರದ ಪಕ್ಷದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡುವುದಾಗಿ ಬೆಂಬಲಿಗರು ಮತ್ತು ಕಾರ್ಯಕರ್ತರ ಒತ್ತಾಯದ ನಡುವೆ ಭರವಸೆ ನೀಡಿದರು.