Thursday, May 30, 2024

Latest Posts

ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ಯಶಸ್ವಿಗೆ ಸಚಿವ ಎಸ್.ಟಿ.ಸೋಮಶೇಖರ್ ಅವರಿಂದ ಧನ್ಯವಾದ ಸಮರ್ಪಣೆ

- Advertisement -

ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಿದ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದ ಹಿನ್ನೆಲೆಯಲ್ಲಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಮೈಸೂರಿನ ಅರಮನೆ ಆವರಣದಲ್ಲಿ ನಡೆದ ಯೋಗ ಕಾರ್ಯಕ್ರಮ ಅತ್ಯಂತ ಅವಿಸ್ಮರಣೀಯವಾದುದು. ಈ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಪೂರ್ಣಗೊಂಡಿದೆ. ಈ ಯಶಸ್ಸಿಗೆ ಕಾರಣೀಭೂತರಾದ ಯೋಗಪಟುಗಳು, ನಾಗರಿಕರು, ಅಧಿಕಾರಿಗಳು, ಜನಪ್ರತಿನಿಧಿಗಳು, ಮಾಧ್ಯಮ ಮಿತ್ರರು, ಸೇರಿದಂತೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕ ರಾಮದಾಸ್, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಪೊಲೀಸ್ ಕಮಿಷನರ್ ಚಂದ್ರಗುಪ್ತ, ಪಾಲಿಕೆ ಆಯುಕ್ತ ಲಕ್ಷ್ಮಿಕಾಂತ್ ರೆಡ್ಡಿ, ಜಿಪಂ ಸಿಇಒ ಪೂರ್ಣಿಮಾ ಸೇರಿದಂತೆ ನಾನಾ ನಿಗಮ ಮಂಡಳಿ ಅಧ್ಯಕ್ಷರು, ಅಧಿಕಾರಿಗಳು ಉಪಸ್ಥಿತರಿದ್ದರು.

 

- Advertisement -

Latest Posts

Don't Miss