73 ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ರಾಯಚೂರು(Raichur) ನಗರದ ಡಿಆರ್ ಪೊಲೀಸ್ ಮೈದಾನದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ(Shankar Patil Munenakoppa) ಧ್ವಜಾರೋಹಣ ನೆರವೇರಿಸಿದರು. ನಂತರ ವಿವಿಧ ತುಕಡಿಗಳಿಂದ ಗೌರವ ವಂದನೆ ಕಾರ್ಯಕ್ರಮ ನೆರವೇರಿತು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ರಾಯಚೂರು ಉಸ್ತುವಾರಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಬಿಜೆಪಿಯ ಯಾವ ಶಾಸಕರು ಕಾಂಗ್ರೆಸ್ ಪಕ್ಷದ ಕದ ತಟ್ಟುತ್ತಿಲ್ಲ, ರಾಜಕೀಯಕ್ಕಾಗಿ ಸಿದ್ದರಾಮಯ್ಯ ಹೇಳಿಕೆ ನೀಡುತ್ತಿದ್ದಾರೆ. ಚುನಾವಣೆಯ ಗಿಮಿಕ್ ಗಾಗಿ ಮೇಕೆದಾಟು ಪಾದಯಾತ್ರೆ ಮಾಡಿದ್ದಾರೆ. ಕೋರ್ಟ್(coart) ಚೀಮಾರಿ ಹಾಕಿದ್ದರಿಂದ ಪಾದಯಾತ್ರೆ ನಿಲ್ಲಿಸಿದ್ದಾರೆ. ಇನ್ನು ಸತೀಶ್ ಜಾರಕಿಹೊಳಿ(Satish Jarkiholi) ಅವರು ಮಹದಾಯಿಗಾಗಿ ಯಾತ್ರೆ ಆರಂಭಿಸುವುದಾಗಿ ಹೇಳಿದ್ದಾರೆ. ಮೊದಲು ಮಹದಾಯಿ ವಿಷಯದಲ್ಲಿ ತಮ್ಮ ಪಕ್ಷದ ನಾಯಕಿ ಸೋನಿಯಾಗಾಂಧಿ(Sonia Gandhi) ಅವರ ಅಭಿಪ್ರಾಯ ಕೇಳಿ ತಿಳಿಯಲಿ, ಗೋವಾದಲ್ಲಿ ಯಾವುದೇ ಕಾರಣಕ್ಕೂ ಮಹದಾಯಿ ಮತ್ತು ಕಳಸಾ-ಬಂಡೂರಿ ಗೆ ನೀರು ಬಿಡುವ ಪ್ರಶ್ನೆಯೇ ಇಲ್ಲ ಎಂದು ಹಿಂದೆ ಅವರು ಹೇಳಿದ್ದಾರೆ. ಹೀಗಾಗಿ ಸತೀಶ್ ಜಾರಕಿಹೊಳಿಯವರು ಸೋನಿಯಾಗಾಂಧಿಯವರ ಅಭಿಪ್ರಾಯ ಕೇಳಿ ನಂತರ ಮಹದಾಯಿ ಯಾತ್ರೆ ಕೈಗೊಳ್ಳಲಿ, ಚುನಾವಣೆಗಾಗಿ ಮೇಕೆದಾಟು, ಮಹದಾಯಿ ಯಾತ್ರೆ ಮಾಡುವುದನ್ನು ಬಿಡಲಿ ಎಂದು ಸಚಿವ ಶಂಕರ್ ಪಾಟೀಲ್ ತಿರುಗೇಟು ನೀಡಿದ್ದಾರೆ. ಇನ್ನು ಇದೇ ವೇಳೆ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಪಕ್ಷದ ಶಾಸಕರು ಬಿಜೆಪಿ ಸೇರುತ್ತಾರೆ ಎಂದು ಹೇಳಿರುವ ಹೇಳಿಕೆಗೆ ರಮೇಶ್ ಜಾರಕಿಹೊಳಿ(Ramesh Jarkiholi) ಯವರು 25 ವರ್ಷ ಕಾಂಗ್ರೆಸ್ ಪಕ್ಷದ ಶಾಸಕರಾಗಿದ್ದವರು ಅವರಿಗೆ ಕಾಂಗ್ರೆಸ್ ಪಕ್ಷದ ಹಲವು ಶಾಸಕರ ಒಡನಾಟವಿದೆ ಹಾಗಾಗಿ ಕಾಂಗ್ರೆಸ್ ಪಕ್ಷದ ಶಾಸಕರು ಬಿಜೆಪಿ ಸೇರುತ್ತಾರೆ ಎಂದು ಹೇಳಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಅವರ ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.
ಅನಿಲ್ ಕುಮಾರ್, ಕರ್ನಾಟಕ ಟಿವಿ, ರಾಯಚೂರು.