- Advertisement -
Dharwadd News: ಡೆಂಗ್ಯೂ ಹಾಗೂ ಚಿಕನ್ ಗುನ್ಯಾ ಪ್ರಕರಣಗಳು ಧಾರವಾಡದಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಚಿವ ಸಂತೋಷ ಲಾಡ್ ಧಾರವಾಡ ಜಿಲ್ಲಾ ಆಸ್ಪತ್ರೆಗೆ ಭೇಟಿ ಮಾಡಿ ರೋಗಿಗಳ ಆರೋಗ್ಯ ವಿಚಾರಿಸಿದರು ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ನೀಡುತ್ತಿರುವ ಚಿಕಿತ್ಸಾ ಕ್ರಮ ಹಾಗೂ ರೋಗಿಗಳಿಗೆ ನೀಡುತ್ತಿರುವ ಚಿಕಿತ್ಸೆ ಕುರಿತು ಧಾರವಾಡ ಜಿಲ್ಲಾ ಆಸ್ಪತ್ರೆಯ ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು, ಜಿಪಂ ಸಿಇಓ ಸ್ವರೂಪ ಟಿ.ಕೆ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ. ಶಶಿ ಪಾಟೀಲ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಸಂಗಪ್ಪ ಗಾಭಿ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಇದ್ದರು. ಆಸ್ಪತ್ರೆಯಲ್ಲಿ ಸ್ವಚ್ಚತೆಯನ್ನು ಕಾಪಾಡುವಂತೆ ಅಧಿಕಾರಿಗಳಿಗೆ ಸಚಿವ ಲಾಡ ಸೂಚನೆ ನೀಡಿದರು.
- Advertisement -