Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಬಿಡದೇ ಸುರಿದ ಮಳೆಗೆ ಅಣ್ಣಿಗೇರಿ ತಾಲೂಕಿನ ಶಿಶುವಿನಹಳ್ಳಿ ಗ್ರಾಮದಲ್ಲಿ ಮನೆ ಬಿದ್ದಿದ್ದು, ಮನೆಯಲ್ಲಿ ಮಲಗಿದ್ದು, ನಾಲ್ವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ನಿಟ್ಟಿನಲ್ಲಿ ಸಚಿವ ಸಂತೋಷ ಲಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶಿಶುವಿನಹಳ್ಳಿಯ ಶಿವಾನಂದ ಕೌಜಗೆರಿ ಎಂಬುವವರ ಮನೆ ರಾತ್ರಿ ಮಲಗಿದ್ದ ವೇಳೆಯಲ್ಲಿ ಧರೆಗೆ ಉರುಳಿದ್ದು, ನಾಲ್ಕು ಜನಕ್ಕೆ ಗಂಭೀರವಾಗಿ ಗಾಯಗಳಾಗಿವೆ. ಶಾಂತವ್ವ, ಮೈತ್ರಾ, ಅನುಷಾ, ನಾಗೇಶ ಎಂಬುವವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ಈ ನಿಟ್ಟಿನಲ್ಲಿ ಜಿಲ್ಲಾಡಳಿತ ನೇತೃತ್ವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿ ಸಂತ್ರಸ್ತರ ಕುಟುಂಬಕ್ಕೆ ಆರ್ಥಿಕ ಸಹಾಯ ಮಾಡಿದ್ದಾರೆ. ಅಲ್ಲದೇ ಆಸ್ಪತ್ರೆಯ ವೆಚ್ಚವನ್ನು ಭರಿಸುವ ಭರವಸೆ ಜೊತೆಗೆ ಅಧಿಕಾರಿಗಳಿಗೆ ಕೂಡಲೇ ಪರಿಹಾರ ಒದಗಿಸುವಂತೆ ಸೂಚನೆ ನೀಡಿದ್ದಾರೆ.
ಇನ್ನೂ ಮಳೆಯಿಂದ ಹಾನಿಯಾಗಿರುವ ವೃದ್ಧೆ ನಿಂಗಮ್ಮ ಕರಡಿಯವರ ಮನೆಯ ಬಗ್ಗೆ ಸಚಿವರ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿದ್ದು, ವೃದ್ದೆಗೆ 25,000 ಸ್ಥಳದಲ್ಲಿಯೇ ಆರ್ಥಿಕ ನೆರವು ನೀಡಿದ್ದು, ಮನೆಯ ದುರಸ್ತಿಗೆ ಇನ್ನೂ 25,000 ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.