Political News: ಬೆಂಗಳೂರು: ನೆರೆಯ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಕಾಂಗ್ರೆಸ್ ನಾಯಕರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದು, ಇಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಭರ್ಜರಿ ಪ್ರಚಾರ ನಡೆಸಿದರು.
ಪತಂಚೆರು (ಸಂಗರೆಡ್ಡಿ) ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಾಟಾ ಶ್ರೀನಿವಾಸಗೌಡ ಅವರ ಪರ ರೋಡ್ ಶೋ ನಡೆಸಿದರು. ಅಪಾರ ಜನಸ್ತೋಮವನ್ನು ಉದ್ದೇಶಿಸಿ, ಚುನಾವಣಾ ಭಾಷಣ ಮಾಡಿದ ಸಚಿವ ಸಂತೋಷ್ ಲಾಡ್, ಕಾಂಗ್ರೆಸ್ ಬೆಂಬಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.
ನಾನು ನಿಮ್ಮ ನೆರೆಯ ರಾಜ್ಯವಾದ ಕರ್ನಾಟಕದಿಂದ ಬಂದವನು. ನಮ್ಮ ರಾಜ್ಯದ ಜನ ಬಿಜೆಪಿಯನ್ನು ಮನೆಗೆ ಓಡಿಸಿ, ಗ್ಯಾರಂಟಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದಾರೆ. ಹೊಸ ಅಭಿವೃದ್ಧಿಗೆ ಮುನ್ನುಡಿ ಬರೆದಿದ್ದಾರೆ. ಹಾಗೆಯೇ ಇಲ್ಲಿನ ಆಡಳಿತರೂಢ ಕೆಸಿಆರ್ ಪಕ್ಷವನ್ನು ಕೊನೆಗಾಣಿಸಿ, ಕಾಂಗ್ರೆಸ್ಗೆ ಅಧಿಕಾರ ತರುವಂತೆ ಮನವಿ ಮಾಡಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ನುಡಿದಂತೆ ನಡೆದಿದೆ. ಜನತೆಗೆ ನೀಡಿದ್ದ ಐದು ಭರವಸೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ. ತೆಲಂಗಾಣಕ್ಕೆ ನಮ್ಮ ಪಕ್ಷ ಆರು ಗ್ಯಾರಂಟಿಗಳನ್ನು ಘೋಷಿಸಿದೆ. ಈ ರಾಜ್ಯದ ಅಭಿವೃದ್ಧಿಗಾಗಿ, ಜನರ ಒಳಿತಿಗಾಗಿ ಕಾಂಗ್ರೆಸ್ ಬೆಂಬಲಿಸುವಂತೆ ಮನವಿ ಮಾಡಿದರಲ್ಲದೆ, ಇಲ್ಲಿ ಬಿಜೆಪಿ ಆಟವೇನು ನಡೆಯುವುದಿಲ್ಲ ಎಂದು ಹೇಳಿದರು.
ಎಚ್ಡಿಕೆ ಜತೆ ಸಿದ್ದರಾಮಯ್ಯ ಕೂಡಾ ದತ್ತಪೀಠಕ್ಕೆ ಬರಲಿ ಎಂದ ಸಿ.ಟಿ ರವಿ
ಛತ್ರಪತಿ ಶಿವಾಜಿಯ ಫೋಟೋ ಎಡಿಟ್ ಮಾಡಿ, ಅವಹೇಳನ ಮಾಡಿದ ಪುಂಡರು ಅರೆಸ್ಟ್