‘ನಮ್ಮ ಸರ್ಕಾರಕ್ಕೆ ಕೊರೊನಾ ಅಂಕಿ-ಅಂಶ ಮುಚ್ಚಿಡುವ ಉದ್ದೇಶವೂ ಇಲ್ಲ, ಅವಶ್ಯಕತೆಯೂ ಇಲ್ಲ’

ನಿನ್ನೆ ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ಮಾಡಿದ್ದು, ಕೋರೋನಾ ವಿಷಯದಲ್ಲಿ ಸಿಎಂ ಯಡಿಯೂರಪ್ಪ ಮತ್ತು ಸಚಿವ ಸುಧಾಕರ್ ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪಿಸಿದ್ದರು. ಕೊರೊನಾದಿಂದ ಕಡಿಮೆ ಜನ ಸತ್ತಿದ್ದಾರೆ. ಆದ್ರೆ ರಾಜ್ಯ ಸರ್ಕಾರ ಹೆಚ್ಚಿನ ಸಂಖ್ಯೆಯಲ್ಲಿ ಜನ ಸತ್ತಿದ್ದಾರೆಂದು ರಾಜ್ಯದ ಜನತೆಗೆ ಸುಳ್ಳು ಹೇಳಿದೆ ಎಂದು ಆರೋಪಿಸಿ, ಟ್ವೀಟ್ ಮಾಡಿದ್ದರು.

ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ

9113649531

ಸಾವಯವ ಕಡಲೆಕಾಯಿ ಎಣ್ಣೆ

ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ

ಬೆಂಗಳೂರಿನಲ್ಲಿ Home delivery

8147130507 / 7349360507

ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ ಬೆಳೆದು ತಯಾರಿಸುತ್ತಿರುವ ಭಗವಾನ್

Noni ಹೋಂ ಡೆಲಿವರಿಗಾಗಿ  ಸಂಪರ್ಕಿಸಿ

8147130507 / 7349360507

ಸಿದ್ದರಾಮಯ್ಯರ ಈ ಹೇಳಿಕೆಗೆ, ಫೋಟೋ ಹಾಕಿ ಟ್ವೀಟ್ ಮೂಲಕವೇ ತಿರುಗೇಟು ಕೊಟ್ಟ ಸಚಿವ ಸುಧಾಕರ್, ಈ ಅಂಕಿ-ಅಂಶಗಳು ಇ-ಜನ್ಮ ತಂತ್ರಾಂಶದಲ್ಲಿ ತಾತ್ಕಾಲಿಕವಾಗಿ ದಾಖಲಿಸಲಾಗಿರುವ ದತ್ತಾಂಶವಾಗಿದ್ದು, ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ ಅವರು ಹೊರಡಿಸಿರುವ ಮಾರ್ಗಸೂಚಿಗಳ ಅನುಸಾರ ಪರಿಷ್ಕರಣೆ ನಡೆಯಬೇಕಿದೆ. ಈ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿದ್ದು ಅಂತಿಮ ಅಂಕಿ-ಅಂಶಗಳ ಪ್ರಕಟಣೆ ಇನ್ನೂ ಬಾಕಿಯಿದೆ ಎಂದಿದ್ದಾರೆ.

ನಮ್ಮ ಸರ್ಕಾರಕ್ಕೆ ಕೊರೊನಾ ಅಂಕಿ-ಅಂಶಗಳನ್ನ ಮುಚ್ಚಿಡುವ ಉದ್ದೇಶವೂ ಇಲ್ಲ ಅದರ ಅವಶ್ಯಕತೆಯೂ ಇಲ್ಲ. ಜವಾಬ್ದಾರಿಯುತ ಸ್ಥಾನಗಳಲ್ಲಿರುವವರು ಕೇವಲ ರಾಜಕೀಯ ಲಾಭಕ್ಕಾಗಿ ಸುಳ್ಳು ಅಪಾದನೆಗಳನ್ನು ಮಾಡುವುದು ಸರಿಯಲ್ಲ. ಇದು ಕಳೆದ 1 ವರ್ಷದಿಂದ ಹಗಲಿರುಳು ಶ್ರಮಿಸುತ್ತಿರುವ ಕೊರೊನಾ ಯೋಧರಿಗೆ ಎಸಗಿರುವ ಅಪಮಾನ ಎಂದು ಸಚಿವ ಸುಧಾಕರ್ ಟ್ವೀಟ್ ಮಾಡುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ

9113649531

ಸಾವಯವ ಕಡಲೆಕಾಯಿ ಎಣ್ಣೆ

ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ

ಬೆಂಗಳೂರಿನಲ್ಲಿ Home delivery

8147130507 / 7349360507

ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ ಬೆಳೆದು ತಯಾರಿಸುತ್ತಿರುವ ಭಗವಾನ್

Noni ಹೋಂ ಡೆಲಿವರಿಗಾಗಿ  ಸಂಪರ್ಕಿಸಿ

8147130507 / 7349360507

About The Author