Monday, December 23, 2024

Latest Posts

ದುರ್ಯೋಧನ ಐಹೊಳೆ ಅವರಿಗೆ ಸಚಿವ ಸ್ಥಾನ ನೀಡುವಂತೆ ಪ್ರತಿಭಟನೆ

- Advertisement -

www.karnatakatv.net : ಬೆಳಗಾವಿ: ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ, ವಿವಿಧ ದಲಿತಪರ ಸಂಘಟನೆಗಳು ನಗರದಲ್ಲಿ  ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಗೃಹ ಸಚಿವರಾದ ಅಮೀತ್ ಷಾ ಅವರಿಗೆ ಮನವಿ ಸಲ್ಲಿಸಿದರು.

ಗುರುವಾರ ವಿವಿಧ ದಲಿತಪರ‌ ಸಂಘಟನೆಗಳು ನಗರದ ಅಂಬೇಡ್ಕರ್ ಉದ್ಯಾನವನದಿಂದ ಜಿಲ್ಲಾಧಿಕಾರಿ ಕಛೇರಿವರೆಗೆ ರ‍್ಯಾಲಿ ಮೂಲಕ ಪ್ರತಿಭಟನೆ ನಡೆಸಿದರು. ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಲ್ಲದೆ, 13 ವರ್ಷಗಳಲ್ಲಿ ಕಳಂಕರಹಿತ ಆಡಳಿತ ನಿರ್ವಹಿಸಿದ ಶಾಸಕ ದುರ್ಯೋಧನ ಐಹೊಳೆ  ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ದಲಿತಪರ‌  ಸಂಘಟನೆಗಳು ಒತ್ತಾಯಿಸಿದರು.

ಈ ವೇಳೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಸುರೇಶ ರಾಯಪ್ಪಗೋಳ ಮಾತನಾಡಿ, ದುರ್ಯೋಧನ ಐಹೊಳೆ ಅವರು ಮಹಾಮಾರಿ ಕೊರೊನ ಸಂದರ್ಭದಲ್ಲಿ ಕ್ಷೇತ್ರದ ಎಲ್ಲಾ ಬಡ ಹಾಗೂ ನಿರ್ಗತಿಕ ಜನರಿಗೆ ಸಹಾಯ ಮಾಡಿದ್ದಾರೆ. ಬೆಳಗಾವಿಯಲ್ಲಿ ಪದೇ ಪದೇ ಪ್ರವಾಹ ಎದುರಿಸುತ್ತಿರುವ ಸಂದರ್ಭದಲ್ಲಿ ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ವೈಯಕ್ತಿಕವಾಗಿ ಸಹಾಯ ಮಾಡುತ್ತಿದ್ದಾರೆ. ಎಲ್ಲಾ

ವಿಚಾರಗಳನ್ನು ಗಮನಿಸಿ ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಅವರನ್ನು ಹೊಸ ಸಚಿವ ಸಂಪುಟದಲ್ಲಿ ಅವಕಾಶ  ನೀಡಬೇಕೆಂದು ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸುತ್ತಿದ್ದೇವೆ. ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ರಾಜೇಂದ್ರ ಐಹೊಳೆ, ಬಸವರಾಜ ಸನದಿ, ಮನೋಜ ಕೆಳಗೇರಿ, ರವಿ ಹಕ್ಯಾಗೋಳ, ರವಿ ಅರ್ಧೂರು, ಶ್ರವಣಕುಮಾರ ಬೇವಿನಕಟ್ಟಿ, ಸದಾಶಿವ ಮಸಾಳೆ, ಮಿಲಿಂದ ಐಹೊಳೆ ಸೇರಿದಂತೆ ಮತ್ತಿತರರು ದಲಿತ ಮುಖಂಡರು ಪಾಲ್ಗೊಂಡಿದ್ದರು.

- Advertisement -

Latest Posts

Don't Miss