- Advertisement -
Hubballi News: ಹುಬ್ಬಳ್ಳಿ: ಮನೆ ಮುಂದೆ ನಿಲ್ಲಿಸಿದ್ದ ಆಟೋಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ನೇಕಾರ ನಗರದ ಮಹಾಲಕ್ಷ್ಮೀ ಕಾಲೋನಿಯಲ್ಲಿ ಈ ಘಟನೆ ನಡೆದಿದೆ.
ವೀರಣಗೌಡ ಪಾಟೀಲ್ ಎಂಬುವವರಿಗೆ ಸೇರಿದ ಆಟೋ ಇದಾಗಿದ್ದು, ನಿನ್ನೆ ರಾತ್ರಿ ಆಟೋವನ್ನು ಮನೆ ಮುಂದೆ ನಿಲ್ಲಿಸಲಾಗಿತ್ತು. ಮಧ್ಯರಾತ್ರಿ ಬಂದ ದುಷ್ಕರ್ಮಿಗಳು , ಆಟೋಗೆ ಬೆಂಕಿ ಹಚ್ಚಿ, ಪರಾರಿಯಾಗಿದ್ದಾರೆ. ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -