www.karnatakatv.net : ಬೆಳಗಾವಿ : ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾದ ಭಾಗ್ಯ ಲಕ್ಷ್ಮಿ ಯೋಜನೆ ಜನಪ್ರಿಯತೆ ಹೊಂದಿದೆ. ಈ ಯೋಜನೆಯ ಲಾಭವನ್ನು ಹೆಣ್ಣು ಮಕ್ಕಳಿಗೆ ಸಿಗಬೇಕು ಎಂದು ಶಾಸಕ ಅನಿಲ ಬೆನಕೆ ಅವರು ತಿಳಿಸಿದರು.
ಬುಧವಾರ ಮಹಾನಗರ ಪಾಲಿಕೆಯ ತಮ್ಮ ಕಚೇರಿಯಯಲ್ಲಿ ಭಾಗ್ಯ ಲಕ್ಷ್ಮಿ ಬಾಂಡ್ ವಿತರಣೆ ಮಾಡದಿದ ಬಳಿಕ ಮಾತನಾಡಿದ ಅವರು, ಹೆಣ್ಣುಮಕ್ಕಳಿಗೆ 18 ವರ್ಷ ತುಂಬಿದ ಬಳಿಕ ಅವರಿಗೆ 1 ಲಕ್ಷ ರೂಪಾಯಿ ರಾಜ್ಯ ಸರ್ಕಾರ ನೀಡುವ ಯೋಜನೆ ಇದಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಬೇಟಿ ಬಚಾವೊ ಬೇಟಿ ಪಡಾವೋ ಎಂಬ ಯೋಜನೆ ಜಾರಿಗೆ ತಂದಿದ್ದು, ಪ್ರತಿಯೊಂದು ಹೆಣ್ಣು ಮಕ್ಕಳಿಗೂ ಶಿಕ್ಷಣ ಸಿಗಬೇಕು. ಹೆಣ್ಣುಮಕ್ಕಳು ಶಿಕ್ಷಣ ಪಡೆದುಕೊಂಡರೆ ಅವರು ಎಲ್ಲಾ ಕ್ಷೇತ್ರದಲ್ಲಿ ಹೆಸರು ಮಾಡಬಹುದು ಎಂದು ತಿಳಿಸಿದರು.
ಇತ್ತೀಚೆಗೆ ನಡೆದ ಓಲಂಪಿಕ್ ನಲ್ಲಿ ಭಾರತ ಪರ ಹೆಣ್ಣು ಮಕ್ಕಳು ಹೆಚ್ಚು ಪದಕಗಳನ್ನು ಗೆಲ್ಲುವ ಮೂಲಕ ಸಾಧನೆ ಮಾಡಿದ್ದಾರೆ. ಹಾಗಾಗಿ ಹೆಣ್ಣು ಮಕ್ಕಳನ್ನು ಶಿಕ್ಷಣ ನೀಡಿ, ಬೆಳೆಸಬೇಕು .ಭಾಗ್ಯಲಕ್ಷ್ಮಿ ಯೋಜನೆಯು ಒಂದು ಕುಟುಂಬದ ಇಬ್ಬರು ಹೆಣ್ಣು ಮಕ್ಕಳಿಗೆ ಅನ್ವಯವಾಗುತ್ತದೆ ಎಂದು ಶಾಸಕ ಅನಿಲ ಬೆನಕೆ ಅವರು ತಿಳಿಸಿದರು.