Saturday, July 5, 2025

Latest Posts

ತಂದೆ ಕನಸನ್ನು ನನಸು ಮಾಡಿದ ಶಾಸಕ ದರ್ಶನ್ ಧ್ರುವ ನಾರಾಯಣ್

- Advertisement -

Political News: ಧ್ರುವ ನಾರಾಯಣ್. ಇದ್ದಿದ್ದು ಕಾಂಗ್ರೆಸ್ ಪಕ್ಷದಲ್ಲಾದರೂ, ಬೇರೆ ಪಕ್ಷದಲ್ಲೂ ಆತ್ಮೀಯರನ್ನು ಹೊಂದಿದ್ದ ಅಜಾತ ಶತ್ರು. ತಾವು ಬದುಕಿದ್ದಾಗ, ಗ್ರಾಮೀಣ ಭಾಗದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ವಿದ್ಯಾರ್ಥಿಗಳಿಗೆ ಏನಾದರೂ ಸಹಾಯ ಮಾಡಬೇಕು ಎಂದುಕೊಂಡಿದ್ದರು. ಆದರೆ ಅದು ಸಾಧ್ಯವಾಗಿರಲಿಲ್ಲ. ಇದೀಗ ಅವರ ಪುತ್ರ, ಶಾಸಕ ದರ್ಶನ್ ಧ್ರುವ ನಾರಾಯಣ್, ಈ ಕನಸನ್ನು ನನಸು ಮಾಡಿದ್ದಾರೆ.

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್ ಪರೀಕ್ಷೆ ಬರೆಯಲು ಅನುಕೂಲವಾಗಬೇಕು ಎಂದು, ದರ್ಶನ್ ಧ್ರುವ ನಾರಾಯಣ್ ನಂಜನಗೂಡಿನ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಪರೀಕ್ಷಾ ತರಬೇತಿ ಕೇಂದ್ರ ಪ್ರಾರಂಭಿಸಿದ್ದಾರೆ. ಪರೀಕ್ಷಾ ತರಬೇತಿ ಕೇಂದ್ರದ ಉದ್ಘಾಟನೆ ಬಳಿಕ ಮಾತನಾಡಿದ ದರ್ಶನ್, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದು, ಜೀವನ ರೂಪಿಸಿಕೊಳ್ಳಬೇಕು ಎಂದು ಹೇಳಿದರು.

ನನ್ನ ತಂದೆ ಈ ಭಾಗದಲ್ಲಿ ಎರಡು ಬಾರಿ ಚುನಾವಣೆಯಲ್ಲಿ ಆಯ್ಕೆಯಾಗಿ ಬಂದಿದ್ದರು. ಈ ಭಾಗದಲ್ಲಿ ಅವರು ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ಅವರಿಗೆ ಇಲ್ಲಿನ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವ ಚಿಂತನೆ ಇತ್ತು. ಇಂಥ ಪರೀಕ್ಷೆಗಳಿಗೆ ಉಚಿತ ತರಬೇತಿ ಕೇಂದ್ರ ಸ್ಥಾಪಿಸಬೇಕು ಎಂಬ ಆಸೆ ಇತ್ತು. ಹಾಗಾಗಿ ಅವರ ಹೆಸರಿನಲ್ಲಿ ಈ ತರಬೇತಿ ಕೇಂದ್ರವನ್ನು ಆರಂಭಿಸಿದ್ದೇನೆ. ಇಲ್ಲಿ ತರಬೇತಿ ಪಡೆದು ವಿದ್ಯಾರ್ಥಿಗಳು ಹೆಚ್ಚು ಅಂಕ ಗಳಿಸಿ, ತಾಲೂಕನ್ನು ಪ್ರಥಮ ಸ್ಥಾನಕ್ಕೆ ಕೊಂಡೊಯ್ಯಬೇಕು ಎಂದರು.

- Advertisement -

Latest Posts

Don't Miss