ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿಗಳ ಕುಟುಂಬಕ್ಕೆ ತಲಾ ಐದು ಸಾವಿರು ರೂ ಹಾಗೂ ಪುಡ್ ಕಿಟ್ ವಿತರಣೆಗೆ ಶಾಸಕರ ಜಮೀರ್ ಅಹ್ಮದ್ ಖಾನ್ ಬೆಂಬಲಿಗರು, ಇಂದು ಕಾರ್ಯಕ್ರಮ ಆಯೋಜಿಸಿದ್ದರು. ಈ ವಿಚಾರಕ್ಕಾಗಿ ಗಲಭೆಕೋರರ ಬೆಂಬಲಕ್ಕೆ ನಿಂತಂತ ಶಾಸಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಆದ್ರೇ.. ನನ್ನ ಪಾತ್ರ ಈ ಕಾರ್ಯಕ್ರಮದಲ್ಲಿ ಇಲ್ಲ ಎಂಬುದಾಗಿ ಹೇಳುವ ಮೂಲಕ, ಶಾಸಕ ಜಮೀರ್ ಅಹ್ಮದ್ ಖಾನ್ ಉಲ್ಟಾ ಹೊಡಿದ್ದಾರೆ.
ಅವರು ಇಂದು ಈ ಕುರಿತು ಟ್ವಿಟ್ ಮಾಡಿದ್ದು, ಕಳೆದ 17 ನೇ ತಾರೀಖಿನಂದು ಬೆಂಗಳೂರು ತೊರೆದು ಧಾರ್ಮಿಕ ಯಾತ್ರೆಗಾಗಿ ಮಕ್ಕಾಗೆ ಬಂದಿದ್ದೇನೆ. ಈಗ ನನ್ನ ವಿರುದ್ಧ ಮಾಡಲಾಗುತ್ತಿರುವ ಆರೋಪಗಳಿಗೂ ನನಗೂ ಯಾವ ರೀತಿಯ ಸಂಬಂಧವೂ ಇಲ್ಲ.
ಈ ಎಲ್ಲಾ ಆರೋಪಗಳು ಸತ್ಯಕ್ಕೆ ದೂರವಾದವು ಎಂಬುದಾಗಿ ತಿಳಿಸಿದ್ದಾರೆ.
ಕಳೆದ 17 ನೇ ತಾರೀಖಿನಂದು ಬೆಂಗಳೂರು ತೊರೆದು ಧಾರ್ಮಿಕ ಯಾತ್ರೆಗಾಗಿ ಮಕ್ಕಾಗೆ ಬಂದಿದ್ದೇನೆ. ಈಗ ನನ್ನ ವಿರುದ್ಧ ಮಾಡಲಾಗುತ್ತಿರುವ ಆರೋಪಗಳಿಗೂ ನನಗೂ ಯಾವ ರೀತಿಯ ಸಂಬಂಧವೂ ಇಲ್ಲ.
ಈ ಎಲ್ಲಾ ಆರೋಪಗಳು ಸತ್ಯಕ್ಕೆ ದೂರವಾದವು.— B Z Zameer Ahmed Khan (@BZZameerAhmedK) April 29, 2022