ಆಕ್ಷೇಪಾರ್ಹ ಟ್ವಿಟ್ ಮಾಡಿದ ಸಿದ್ಧರಾಮಯ್ಯ ವಿರುದ್ ಅಟ್ರಾಸಿಟಿ ಕೇಸ್ ದಾಖಲಿಸಲು, ಪೊಲೀಸರಿಗೆ MLC ಛಲವಾದಿ ನಾರಾಯಣಸ್ವಾಮಿ ದೂರು

ಬೆಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಟ್ವೀಟ್ ಮಾಡುವ ಭರದಲ್ಲಿ ತಾವು ಸದಾ ಅಸ್ಪøಶ್ಯರು ಎಂದು ತಿಳಿಸಿ ನನ್ನ ಜಾತಿಗೆ ಅಪಮಾನ ಮಾಡಿದ್ದಾರೆ ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದರು.

ಸಿದ್ದರಾಮಯ್ಯರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಎಸ್.ಸಿ. ಮೋರ್ಚಾ ವತಿಯಿಂದ ಇಂದು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ ಎಂದು ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು. ಸಿದ್ದರಾಮಯ್ಯರ ಬಗ್ಗೆ ನಮಗೆ ಬಹಳ ಗೌರವÀವಿದೆ. ಆದರೆ, ಅವರ ರಾಜಕೀಯ ಜಿದ್ದಾಜಿದ್ದಿ ವಿಚಾರದಲ್ಲಿ ನಮ್ಮ ಆಕ್ಷೇಪವಿದೆ ಎಂದು ತಿಳಿಸಿದರು.

ನಮ್ಮನ್ನು ಗುಲಾಮರು, ಅಸ್ಪøಶ್ಯರೆಂದು ಕರೆದು ನಿಂದಿಸಿದ್ದಾರೆ. ಇಂಥ ನಿಂದನೆಯ ಅಧಿಕಾರ ಅವರಿಗೆ ಇಲ್ಲ. ಎಸ್‍ಸಿ, ಎಸ್‍ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಈ ದೂರು ನೀಡಿದ್ದೇವೆ. ಅವರು ಜಾತಿ ನಿಂದನೆ ಮಾಡಿದ್ದು, ಎಫ್‍ಐಆರ್ ಮಾಡಿ ಬಂಧಿಸಲು ಒತ್ತಾಯಿಸಿದ್ದೇನೆ. ಅವರನ್ನು ಬಂಧಿಸುವಲ್ಲಿ ವಿಳಂಬ ಮಾಡಿದರೆ ಧರಣಿ ಮಾಡುವುದಾಗಿ ತಿಳಿಸಿದರು.

ಇದು ಸಿದ್ದರಾಮಯ್ಯರ ದಲಿತ ವಿರೋಧಿ ಧೋರಣೆಗೆ ಸಾಕ್ಷಿ ಎಂದ ಅವರು, ದಲಿತ ಮಹಿಳೆ ಶ್ರೀಮತಿ ಮೋಟಮ್ಮನವರು ತಮ್ಮ ಆತ್ಮಕಥೆ ಪುಸ್ತಕದಲ್ಲಿ ಸಿದ್ದರಾಮಯ್ಯನವರು ನನ್ನ ಎಲ್ಲ ಬೆಳವಣಿಗೆಗೂ ಬಾಗಿಲು ಹಾಕಿದರು ಎಂದು ಹೇಳಿದ್ದಾರೆ ಎಂದು ವಿವರಿಸಿದರು. ಕಾಂಗ್ರೆಸ್ ಮನಸ್ಥಿತಿ ದಲಿತ ವಿರೋಧಿ ಎಂಬುದು ಸಿದ್ದರಾಮಯ್ಯರ ಮೂಲಕ ವ್ಯಕ್ತವಾಗುತ್ತಿದೆ ಎಂದು ತಿಳಿಸಿದರು.

ಸರಕಾರ ಹಾಗೂ ಪೊಲೀಸರು ಇದರ ಬಗ್ಗೆ ತೀಕ್ಷ್ಣ ಕ್ರಮ ಕೈಗೊಳ್ಳಬೇಕು. ಸಿದ್ದರಾಮಯ್ಯರನ್ನು ತಕ್ಷಣ ಬಂಧಿಸಿ ನನಗೆ ನ್ಯಾಯ ಕೊಡಬೇಕು ಎಂದು ಅವರು ಮನವಿ ಮಾಡಿದರು. ಇದು ಅಂಗೈ ಹುಣ್ಣು ಇದ್ದಂತೆ. ಇದಕ್ಕೆ ಕನ್ನಡಿ ಬೇಕಾಗಿಲ್ಲ. ಆದ್ದರಿಂದ ತಕ್ಷಣ ಅವರನ್ನು ಬಂಧಿಸಬೇಕಿದೆ ಎಂದು ಅವರು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ಈ ಸಂದರ್ಭದಲ್ಲಿ, ಮೋರ್ಚಾದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

 

About The Author