ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಬಿಜೆಪಿ ಎಂಎಲ್ ಸಿ ಹೆಚ್.ವಿಶ್ವನಾಥ್ ಭೇಟಿಯಾಗಿದ್ದಾರೆ. ಬೆಂಗಳೂರಿನ ಸಿದ್ದರಾಮಯ್ಯನವರ ಸರಕಾರಿ ನಿವಾಸದಲ್ಲಿ ಭೇಟಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯನವರ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ. ಮಾಜಿ ಸಚಿವ ಹೆಚ್. ವಿಶ್ವನಾಥ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಸಾಧ್ಯತೆ ದಟ್ಟವಾಗಿದೆ. ಇಂದು ಮಾಜಿ ಸಿಎಂ ಸಿದ್ದರಾಮಯ್ಯನವರ ನಿವಾಸಕ್ಕೆ ತೆರಳಿ ಅವರ ಯೋಗ ಕ್ಷೇಮವನ್ನು ವಿಚಾರಿಸಿಕೊಂಡಿದ್ದಾರೆ. ವಿಶ್ವನಾಥ್ ಅವರು ಬಿಜೆಪಿ ಪಕ್ಷದಿಂದಲೂ ದೂರ ಸರಿದಿದ್ದಾರೆ ಮತ್ತು ಕಾಂಗ್ರೆಸ್ ಸೇರಬಹುದೆಂದು ತೀವ್ರ ಕುತೂಹಲ ಮೂಡಿಸಿದೆ. ವಿಧಾನಸಭಾ ಚುನಾವಣಾ ಸಮೀಪಿಸುತ್ತಿರುವುದರಿಂದ ರಾಜಕೀಯವಾಗಿ ಮುಂದಿನ ಹೆಜ್ಜೆ ಇಡಲು ನಿರ್ಧರಿಸಿದ್ದಾರೆ. ಇದಕ್ಕೆ ಪೂರಕವೆಂಬoತೆ ದೆಹಲಿಯಲ್ಲಿ ಮಹತ್ವದ ಬೆಳವಣಿಗೆಗಳು ನಡೆದಿವೆ. ಇವರ ಬೆಳವಣಿಗೆ ನೋಡುತ್ತಿದ್ದರೆ ರಾಜ್ಯ ರಾಜಕಾರಣದಲ್ಲಿ ಚಂಚಲನವನ್ನು ಸೃಷ್ಠಿಮಾಡಿದೆ.
ಅಂಬೇಡ್ಕರ್ ಪರಿನಿರ್ವಾಣ ದಿನದ ಕಾರ್ಯಕ್ರಮದಲ್ಲಿ ಗದ್ಗದಿತರಾದ ಶಾಸಕ ಹೆಚ್.ಕೆ. ಕುಮಾರಸ್ವಾಮಿ
ಡಾ. ಬಿ.ಆರ್ . ಅಂಬೇಡ್ಕರ್ ಸಮಾಜದ ಶಕ್ತಿಯಾಗಿ ಗೋಚರಿಸಿದ್ದಾರೆ : ಸಿಇಓ ಶಾಂತ ಎಲ್. ಹುಲ್ಮನಿ