www.karnatakatv.net : ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಘೋಷಣೆ ಆಗಿದ್ದು ಈ ಹಿನ್ನೆಲೆಯಲ್ಲಿ ಪಾಲಿಕೆ ಚುನಾವಣೆ ಕುರಿತು ಮಾದರಿ ನೀತಿ ಸಂಹಿತೆ ಆಗಸ್ಟ್ 16ರಂದು ಸೆಪ್ಟೆಂಬರ್ 6ರವರೆಗೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜಾರಿ ಇರುತ್ತದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಅವರು ಮಾಹಿತಿ ನೀಡಿದ್ದಾರೆ.
ಶನಿವಾರ ಬೆಳಗಾವಿಯ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಅವರು ಆಗಸ್ಟ್ 16 ರಂದು ಚುನಾವಣೆ ಅಧಿಸೂಚನೆ ಹೊರಡಿಸುತ್ತೇವೆ ಮತ್ತು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 23. ನಾಮಪತ್ರ ಪರಿಶೀಲಿಸುವ ದಿನ ಆಗಸ್ಟ್ 24, ನಾಮಪತ್ರ ಹಿಂಪಡೆಯಲು ಆಗಸ್ಟ್ 26 ಕೊನೆಯ ದಿನಾಂಕವಾಗಿದ್ದು ಮತದಾನ ನಡೆಸುವ ದಿನಾಂಕ ಸೆಪ್ಟೆಂಬರ್ 3, ಮರು ಮತದಾನದ ಅವಶ್ಯ ಬಿದ್ದರೆ ಸೆ.5 ರಂದು ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ತಿಳಿಸಿದರು.
ಮತದಾನದ ಸಮಯ ಬೆಳಿಗ್ಗೆ ಏಳು ಗಂಟೆಯಿಂದ ಸಾಯಂಕಾಲ ಐದು ಗಂಟೆವರೆಗೆ. ಸೆ.6ರಂದು ಮತ ಏಣಿಕೆ ಕಾರ್ಯ ನಡೆಯಲಿದೆ ಎಂದು ಹೆಚ್ಚಿನ ಮಾಹಿತಿ ನೀಡಿ. ಇನ್ನು 58 ವಾರ್ಡಗಳ ಚುನಾವಣೆ ಅಧಿಕಾರಿಗಳು, ಸಹಾಯಕ ಅಧಿಕಾರಿಗಳ ಕಚೇರಿಯನ್ನು ಮಹಾನಗರ ಪಾಲಿಕೆಯಲ್ಲಿ ಸ್ಥಾಪಿಸಲಾಗುತ್ತದೆ. ಎಲ್ಲ ಮತಗಟ್ಟೆಗಳನ್ನು ನೂರಕ್ಕೆ ನೂರರಷ್ಟು ಪರಿಶೀಲಿಸಿ ಮೂಲಭೂತ ಸೌಕರ್ಯ ಕಲ್ಪಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೆಚ್ಚಿನ ಮಾಹಿತಿ ನೀಡಿದರು.
ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿ ಇರುತ್ತದೆ ಮತ್ತು ಜಿಲ್ಲಾಡಳಿತ ಚುನಾವಣೆ ನಡೆಸಲು ಸಕಲ ಸಿದ್ದತೆ ಮಾಡಿಕೊಂಡು ಪಾಲಿಕೆ ಚುನಾವಣೆ ತಯಾರಿಯಲ್ಲಿ ಉದೆ ಎಂದು ತಿಳಿಸಿದರು.
ನಾಗೇಶ್ ಕರ್ನಾಟಕ ಟಿವಿ ಬೆಳಗಾವಿ