ಮೈಸೂರಿಗೆ ಬರುತ್ತಿರುವ ಮೋದಿಯವರು ಯಾವ ಮುಖ ಇಟ್ಟುಕೊಂಡು ಮತ ಕೇಳ್ತಾರೆ..?: ಸಿಎಂ

Political Newsಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕೃಷ್ಣರಾಜದಲ್ಲಿ ನಡೆದ ಜನಧ್ವನಿ-2 ಯಾತ್ರೆಯ ಬೃಹತ್ ಸಮಾವೇಶವನ್ನು ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ. 

ಮೈಸೂರಿನಲ್ಲಿ ಜಯದೇವ ಆಸ್ಪತ್ರೆ ಮಾಡಿದವರು ಯಾರು? ಮಹಿಳೆಯರು-ಮಕ್ಕಳ ಆಸ್ಪತ್ರೆ ಮಾಡಿದವರು ಯಾರು? ಶಾಲೆ-ಹಾಸ್ಟೆಲ್‌ಗಳನ್ನು ಮಾಡಿದವರು ಯಾರು? ಮೈಸೂರಿನ ಅಭಿವೃದ್ಧಿಗೆ ಸಾವಿರಾರು ಕೋಟಿ ಹಣ ಕೊಟ್ಟ ಸರ್ಕಾರ ಯಾವುದು? ಎನ್ನುವುದು ಮೈಸೂರಿನ ಪ್ರತಿ ಪ್ರಜ್ಞಾವಂತರಿಗೂ ಗೊತ್ತು. ನಾವು ಮಾಡಿದಷ್ಟು ಕೆಲಸವನ್ನು ಮಾಡಲು ಬಿಜೆಪಿಗೂ ಅವಕಾಶ ಇತ್ತು. ಜನ ಅವಕಾಶ ಕೊಟ್ಟಿದ್ದರು. ಆದರೆ ಈ ಅವಕಾಶ ಸಿಕ್ಕಾಗ ಬಿಜೆಪಿ ಸಂಸದರು ಕೆಲಸ ಮಾಡಲಿಲ್ಲ. ಹೀಗಾಗಿ ನುಡಿದಂತೆ ನಡೆದು ಅಭಿವೃದ್ಧಿಯ ದಿಕ್ಕಲ್ಲಿ ಮುನ್ನುಗ್ಗುತ್ತಿರುವ ನಮಗೆ ಅವಕಾಶ ಕೊಡಿ. ಸಾಮಾನ್ಯ ಕಾರ್ಯಕರ್ತರಾಗಿ ಹೋರಾಟ, ಪ್ರತಿಭಟನೆಗಳಿಂದ ಬೆಳೆದ ಎಂ.ಲಕ್ಷ್ಮಣ್ ಅವರನ್ನು ಈ ಬಾರಿ ಗೆಲ್ಲಿಸಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು.

ಬಿಜೆಪಿಗೆ ಮೈಸೂರು-ಕೊಡಗಿನ ಜನತೆ ಅವಕಾಶ ಕೊಟ್ಟಾಗ ಬಿಜೆಪಿ ಸಂಸದರು, ಶಾಸಕರು, ಮುಖ್ಯಮಂತ್ರಿಗಳು, ಪ್ರಧಾನಮಂತ್ರಿಗಳು ಕ್ಷೇತ್ರದ ಅಭಿವೃದ್ಧಿಗೆ ಕೆಲಸ ಮಾಡಲಿಲ್ಲ. ಈಗ ಕೇವಲ ಅಭ್ಯರ್ಥಿಯನ್ನು ಬದಲಾಯಿಸಿ ಮತ ಕೇಳುತ್ತಿದ್ದಾರೆ. ಇದು ಹೊಣೆಗೇಡಿತನ ಅಲ್ಲವೇ? ಪ್ರಧಾನಿ ನರೇಂದ್ರ ಮೋದಿ ಅವರು ಬಡವರ, ದುಡಿಯವ ವರ್ಗಗಳ, ಮಹಿಳೆಯರ ಪರವಾಗಿ ಮಾಡಿದ ಒಂದೇ ಒಂದು ಕೆಲಸ ಯಾರಿಗಾದರೂ ಗೊತ್ತಾ? ಕೇವಲ ಸುಳ್ಳುಗಳನ್ನು ಸೃಷ್ಟಿಸಿ, ಭಾವನಾತ್ಮಕವಾಗಿ ಕೆರಳಿಸುವವರಿಗೆ ಮತ ಹಾಕಿದರೆ ನೀವು ಮೋಸಹೋದಂತೆ ಅಲ್ಲವೇ? ಎಂದು ಸಿಎಂ ಪ್ರಶ್ನಿಸಿದ್ದಾರೆ.

ನಾಳೆ ಮೈಸೂರಿಗೆ ಬರುತ್ತಿರುವ ಮೋದಿಯವರು ಯಾವ ಮುಖ ಇಟ್ಟುಕೊಂಡು ಮತ ಕೇಳ್ತಾರೆ. ಮೋದಿಯವರಾಗಲೀ, ಬಿಜೆಪಿ ಸಂಸದರಾಗಲೀ ಮೈಸೂರಿಗೆ ಏನು ಕೆಲಸ ಮಾಡಿದ್ದಾರೆ ತೋರಿಸಲಿ. ಬರೀ ಸುಳ್ಳುಗಳ ಸವಾರಿ ಮಾಡಿಕೊಂಡು 10 ವರ್ಷ ಮುಗಿಸಿದ್ರು, ಹೀಗಿದ್ದಾಗ ಮೋದಿಯವರು ಯಾವ ಮುಖ ಹೊತ್ಕೊಂಡು ರಾಜ್ಯಕ್ಕೆ ಬರ್ತಾರೆ? ಯಾವ ಮುಖ ಹೊತ್ತಕೊಂಡು ಮತ ಕೇಳುತ್ತಾರೆ? ಸ್ವಾತಂತ್ರ್ಯ ನಂತರ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ಕಾಂಗ್ರೆಸ್. ಬಡತನ ನಿರ್ಮೂಲನೆಗೆ ಇಂದಿರಾಗಾಂಧಿಯವರು 20 ಅಂಶಗಳ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದರು. ಕೇವಲ ಶ್ರೀಮಂತರಿಗಾಗಿ ಕೆಲಸ ಮಾಡಿದ ನರೇಂದ್ರ ಮೋದಿ ಅವರು ಅದೇ ರೀತಿ ಬಡವರಿಗಾಗಿ, ಬಡತನ ಹೋಗಲಾಡಿಸಲು ಒಂದಂಶದ ಕಾರ್ಯಕ್ರಮವನ್ನೂ ಏಕೆ ಕೊಡಲಿಲ್ಲ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

200 ಕೋಟಿ ಆಸ್ತಿ ದಾನ ಮಾಡಿ ಜೈನ ಮುನಿಯಾದ ಗುಜರಾತ್‌ನ ಉದ್ಯಮಿ..

ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಜ್ಯೋತಿಷಿ ಎಸ್‌.ಕೆ.ಜೈನ್ ನಿಧನ

ಧೋನಿಯನ್ನು ನೋಡಲು 64 ಸಾವಿರ ರೂ. ಖರ್ಚು ಮಾಡಿದ ಅಭಿಮಾನಿ, ಆದರೆ ಮಕ್ಕಳ ಫೀಸ್‌ ಕಟ್ಟಲು ದುಡ್ಡಿಲ್ಲ

About The Author