Monday, May 13, 2024

Latest Posts

ಮೋದಿ ಗ್ಯಾರಂಟಿ ಖಾಲಿ ಟ್ರಂಕು: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

- Advertisement -

Political Newsಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಿಯಾಂಕ ಜಾರಕಿಹೊಳಿ ಅವರ ಪರ ಪ್ರಚಾರದ ನಿಮಿತ್ತ ಆಯೋಜಿಸಿದ್ದ “ಪ್ರಜಾಧ್ವನಿ- ಜನ ಸಮಾವೇಶ”ವನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಉದ್ಘಾಟಿಸಿದ್ದಾರೆ. 

ಈ ವೇಳೆ ಬಿಜೆಪಿ ಸರ್ಕಾರದ ವಿರುದ್ಧ ವಾಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ , ಪ್ರತಿ ಬಾರಿ ರಾಜ್ಯಕ್ಕೆ ಬಂದಾಗಲೆಲ್ಲಾ ಪ್ರಧಾನಿ ನರೇಂದ್ರಮೋದಿ ಅವರು ಒಂದಷ್ಟು ಸುಳ್ಳು ಹೇಳಿ ಹೋಗ್ತಾರೆ. ಹೆಣ್ಣುಮಕ್ಕಳ ತಾಳಿ, ಕೈಬಳೆ ಬಗ್ಗೆ ಸುಳ್ಳು ಹೇಳ್ಕೊಂಡು ತಿರುಗೋ ಮೋದಿಯಂತಹವರಿಂದ ಪ್ರಧಾನಿ ಹುದ್ದೆಗೆ ಗೌರವ ಬರುವುದಿಲ್ಲ. ಕಿತ್ತೂರು ರಾಣಿ ಜಯಂತಿ ಆಚರಣೆಗೆ ಆದೇಶಿಸಿದ್ದು ನಾವು. ಇದನ್ನು ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಮಾಡಲಿಲ್ಲ. ನಾವು ಯಾವತ್ತೂ ಶಿವಾಜಿ ಮಹಾರಾಜರನ್ನು ಅವಮಾನಿಸಿಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಪಕ್ಷದವರು ರಾಣಿ ಚನ್ನಮ್ಮರಿಗೆ ಮತ್ತು ಶಿವಾಜಿ ಮಹಾರಾಜರಿಗೆ ಅವಮಾನ ಮಾಡಿದೆ ಎಂದು ಹಸಿ ಹಸಿ ಸುಳ್ಳು ಹೇಳುತ್ತಾರೆ. ಸುಳ್ಳಿಗೆ ಒಂದು ಮಿತಿಯಾದರೂ ಬೇಡ್ವಾ? ಹತ್ತು ವರ್ಷ ಆಳಿದ ಪ್ರಧಾನಿಯೊಬ್ಬರು ಚುನಾವಣೆ ಗೆಲ್ಲಲು ಈ ರೀತಿ ಸುಳ್ಳಿನ ಮೊರೆ ಹೋಗಿರುವುದು ನಾಚಿಕೆಗೇಡು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇನ್ನು ಈ ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗದವರೂ ಅಧಿಕಾರಕ್ಕೆ ಬಂದಂತೆ. ಸರ್ಕಾರದ ಗ್ಯಾರಂಟಿಗಳನ್ನು ಪಡೆಯುವ ಮೂಲಕ ಎಲ್ಲಾ ವರ್ಗದವರೂ ಈಗ ಕರ್ನಾಟಕ ಸರ್ಕಾರದ ಪಾಲುದಾರರಾಗಿದ್ದಾರೆ. ಆದರೆ, ಎನ್‌ಡಿಎ ಜೊತೆ ಇರುವ ಪಕ್ಷಗಳು ಆಡಳಿತ ನಡೆಸುತ್ತಿರುವ ಯಾವುದೇ ರಾಜ್ಯಗಳಲ್ಲೂ ಈ ರೀತಿಯ ಗ್ಯಾರಂಟಿಗಳಿಲ್ಲ. ಕಾಂಗ್ರೆಸ್‌ ಗ್ಯಾರಂಟಿಗಳಿಂದ ತಮಗೆ ನಷ್ಟವಾಗಬಹುದು ಎಂದು ಹೆದರಿರುವ ಪ್ರಧಾನಿ ಮೋದಿ ಅವರೇ ನಮ್ಮನ್ನು ಕಾಪಿ ಹೊಡೆದಿದ್ದಾರೆ. ನಮ್ಮ ಗ್ಯಾರಂಟಿ ಜೊತೆ ಅವರ ಹೆಸರು ಸೇರಿಸಿಕೊಂಡಿದ್ದಾರೆ. ಆದರೆ ಮೋದಿ ಗ್ಯಾರಂಟಿಯಲ್ಲಿ ಯಾರ್ಗಾದ್ರೂ 10 ರೂಪಾಯಿ ಲಾಭ ಆಗುತ್ತದೆಯೇ? ಅದೊಂದು ʼಖಾಲಿ ಟ್ರಂಕುʼ. ಅದೇ ಕಾಂಗ್ರೆಸ್‌ ಗ್ಯಾರಂಟಿಗಳಿಂದ ಇಂದು ಮಹಿಳೆಯರ ಬಲವರ್ಧನೆಯಾಗಿದೆ. ನಿರಾತಂಕವಾಗಿ ಎಲ್ಲ ಹೆಣ್ಣುಮಕ್ಕಳೂ ಸಂಸಾರ ನಡೆಸುತ್ತಿದ್ದಾರೆ. ಬರ ಪರಿಹಾರದ ವಿಷಯದಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮಹಾ ಮೋಸ ಮಾಡಿದೆ. ನಾವು ಸುಪ್ರೀಂ ಕೋರ್ಟ್‌ ಬಾಗಿಲು ತಟ್ಟಿದಮೇಲೆ ಹೆದರಿ ಕಾಟಾಚಾರಕ್ಕೆ ನಾವು ಕೇಳಿದ ₹18,172 ಕೋಟಿಯಲ್ಲಿ ಕೇವಲ ₹ 3454 ಕೋಟಿ ಕೊಟ್ಟಿದ್ದಾರೆ. ಇವರಿಗೆ ನಿಜವಾಗಿಯೂ ರೈತರ ಬಗ್ಗೆ ಕಾಳಜಿ ಇದೆಯೇ? ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.

ಮದುವೆ ಬಳಿಕವೂ ನಟನೆ ಮುಂದುವರಿಸುತ್ತೇನೆ: ನಟಿ ಮಾನ್ವಿತಾ ಕಾಮತ್

ಕೇಂದ್ರ ಸರ್ಕಾರ ಒಲ್ಲದ ಮನಸ್ಸಿನಿಂದ ಕರ್ನಾಟಕಕ್ಕೆ ಬರ ಪರಿಹಾರ ನೀಡಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್‌ ಅಭ್ಯರ್ಥಿ ಇ ತುಕಾರಂ ಪರ ಮತಯಾಚನೆ: ಪ್ರಧಾನಿ ಮೋದಿ ವಿರುದ್ಧ ಟೀಕಾಪ್ರಹಾರ

- Advertisement -

Latest Posts

Don't Miss