Sunday, September 8, 2024

Latest Posts

ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ

- Advertisement -

ಬೆಂಗಳೂರು: ಹೆಚ್ಎಎಲ್ ಏರ್ಪೋರ್ಟ್ ಗೆ ಆಗಮಿಸಿದ ಪ್ರಧಾನಿ ಮೋದಿ, ವಿಶೇಷ ವಿಮಾನದಲ್ಲಿ ಆಗಮಿಸಿದರು. ಮೋದಿ ಸ್ವಾಗತಿಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಜರಿದ್ದರು.

ನಗರಸಭೆಯ ಸಾಮಾನ್ಯ ಸಭೆಗೆ ಪ್ರಾರಂಭದಲ್ಲೇ ವಿಘ್ನ..

ಹೆಚ್ಎಎಲ್ ನಿಂದ ಮೇಖ್ರಿ ಸರ್ಕಲ್ ನಿಂದ ಹೊರಟು ಮೋದಿ ಶಾಸಕರ ಭವನಕ್ಕೆ ತೆರಳುತ್ತಿದ್ದಾರೆ. ಬೃಹತ್ ಸಮಾವೇಶಗಳಲ್ಲಿ ಪಾಲ್ಗೊಳ್ಳಲಿರುವ ಮೋದಿ ಮೊದಲು ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಪುತ್ಥಳಿಗೆ ಪುಷ್ಪಾರ್ಚನೆ ಮಾಡುತ್ತಾರೆ ಮತ್ತು ವಾಲ್ಮೀಕಿ ಪುತ್ಥಳಿಗೂ ಮಾಲಾರ್ಪಣೆ ಮಾಡಲಿದ್ದಾರೆ.

ನಂತರ ಕೆಎಸ್ಆರ್ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ವಂದೇ ಭಾರತ್ ಎಕ್ಸಪ್ರೆಸ್ ಗೆ ಚಾಲನೆ ನೀಡಲಿದ್ದಾರೆ. ಕೆಂಪೇಗೌಡರ 108 ಅಡಿ ಎತ್ತರದ ಪ್ರಗತಿ ಪ್ರತಿಮೆ, ಥೀಮ್ ಪಾರ್ಕ್ ಉದ್ಘಾಟನೆ ಮಾಡಿ, ವಿಮಾನ ನಿಲ್ದಾಣದ ಬಳಿ ಕೆಎಸ್ಎಸ್ಐಡಿಎಲ್ ಮೈದಾನದಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ತ್ವರಿತಗತಿಯಲ್ಲಿ ರಸ್ತೆ ಕಾಮಗಾರಿಗಳು ಪೂರ್ಣಗೊಳಿಸಿ: ಸಚಿವ ಡಾ.ನಾರಾಯಣಗೌಡ

- Advertisement -

Latest Posts

Don't Miss