www.karnatakatv.net: ಪ್ರಧಾನಿ ನರೇಂದ್ರ ಮೋದಿ ಇಟಲಿಗೆ ಜಿ20 ಶೃಂಗಸಭೆಗೆ ತೆರಳಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್ ಅವರನ್ನು ಭಾರತಕ್ಕೆ ಬರಲು ಆಹ್ವಾನಿಸಿದರು.
ನರೇಂದ್ರ ಮೋದಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್ ಅವರನ್ನು ಭೇಟಿ ಮಾಡಿ ಅವರನ್ನು ಭಾರತಕ್ಕೆ ಆಹ್ವಾನಿಸಿದ್ದರು. ಹಾಗೇ ಈ ಕಾರ್ಯಕ್ರಮದಲ್ಲಿ ಜಾಗತಿಕ ಇಂಧನ ಬಿಕ್ಕಟ್ಟು ಹೆಚ್ಚಾದ ವಿಚಾರದ ಕುರಿತು ಚರ್ಚೆ ನಡೆಸಿದ್ದು, ಜಿ-20 ನ ಮೊದಲ ಸಭೆಯು ಆರೋಗ್ಯ ಸಮಸ್ಯೆಗಳ ಮೇಲೆ ಕೇಂದ್ರೀಕೃತವಾಗಿತ್ತು. ನಾಳೆ ರೋಮ್‌ನಲ್ಲಿ ನಡೆಯಲಿರುವ ಜಿ 20 ಶೃಂಗಸಭೆಯ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬಿಡನ್ ಅವರು “ಪೂರೈಕೆ ಸರಪಳಿ ಸ್ಥಿತಿಸ್ಥಾಪಕತ್ವ” ಕುರಿತು ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ ಮತ್ತು ಇತರ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ ಎಂದು ಹರ್ಷವರ್ಧನ್ ಶ್ರಿಂಗ್ಲಾ ಮಾಹಿತಿ ನೀಡಿದರು.




