www.karnatakatv.net : ಭಾರತದ ಪ್ರಧಾನಿ ನರೇಂದ್ರ ಮೋದಿ ಜಿ-20 ಶೃಂಗಸಭೆಗಾಗಿ ರೋಮ್ ಗೆ ಭೇಟಿ ನೀಡಿದ್ದಾರೆ. ಇಂದು ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿಯಾದರು. ಪೋಪ್ ಫ್ರಾನ್ಸಿಸ್ ಅವರೊಂದಿಗೆ ಪ್ರಧಾನಿ ಮೋದಿಯವರ ಮೊದಲ ಭೇಟಿ ಇದಾಗಿದ್ದು, ಅವರನ್ನು ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದರು.
ಇಂದು ಜಿ-20 ಶೃಂಗಸಭೆಯಲ್ಲಿ ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿಯಾಗಿ, ಹವಾಮಾನ ಬದಲಾವಣೆಯ ವಿರುದ್ಧ ಹೋರಾಡುವುದು ಮತ್ತು ಬಡತನವನ್ನು ತೊಡೆದುಹಾಕುವುದು ಸೇರಿದಂತೆ ಗ್ರಹವನ್ನು ಉತ್ತಮಗೊಳಿಸುವ ಗುರಿಯನ್ನು ಹೊಂದಿರುವ ವಿಷಯಗಳ ಕುರಿತು ಪಿಎಂ ಮೋದಿ ಮತ್ತು ಪೋಪ್ ಚರ್ಚಿಸಿದರು. ಜೊತೆಗೆ ಪೋಪ್ ಫ್ರಾನ್ಸಿಸ್ ಅವರನ್ನು ಭಾರತಕ್ಕೆ ಭೇಟಿ ನೀಡುವಂತೆ ಪ್ರಧಾನಿ ಆಹ್ವಾನ ನೀಡಿದ್ದಾರೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ಅವರು ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿ ಮಾಡಲು ಪ್ರಧಾನಿ ಮೋದಿ ಜೊತೆಗಿದ್ದರು. ಮೂಲಗಳ ಪ್ರಕಾರ ಕೇವಲ ಇಪ್ಪತ್ತು ನಿಮಿಷಗಳ ಕಾಲ ನಿಗದಿಯಾಗಿದ್ದ ಸಭೆ ಒಂದು ಗಂಟೆ ಕಾಲ ನಡೆಯಿತು. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ಜಪಾನ್‌ನ ಪಿಎಂ ಫುಮಿಯೊ ಕಿಶಿಡಾ, ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಾಮಫೋಸಾ ಮತ್ತು ಮೆಕ್ಸಿಕನ್ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಸೇರಿದಂತೆ ಹಲವು ನಾಯಕರು ಈ ಶೃಂಗಸಭೆಗೆ ಗೈರಾಗಲಿದ್ದಾರೆ ಎನ್ನಲಾಗಿದೆ.