www.karnatakatv.net: ಕಾಂಗ್ರೆಸ್ ಮಾಡುತ್ತಿರುವ ತಪ್ಪುಗಳಿಂದ ಭಾರತದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಶಕ್ತಿಶಾಲಿ ಆಗುತ್ತಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
ಗೋವಾಗೆ ತೆರಳಿದ್ದ ಮಮತಾ ಬ್ಯಾನರ್ಜಿ, ಗೋವಾ ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿ ಗೋವಾ ಭೇಟಿ ನೀಡಿರುವ ಅವರು ಪಣಜಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿ, ದೇಶದ ಹಳೆ ಪಕ್ಷವಾಗಿರುವ ಕಾಂಗ್ರೆಸ್ ರಾಜಕೀಯವನ್ನು ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ. ಕಾಂಗ್ರೆಸ್ ಪಕ್ಷದ ತಪ್ಪು ನಿರ್ಧಾರಗಳಿಂದ ನರೇಂದ್ರ ಮೋದಿ ಶಕ್ತಿಶಾಲಿ ಆಗುತ್ತಿದ್ದಾರೆ,” ಎಂದು ಆರೋಪಿಸಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿದ ಮಮತಾ ಬ್ಯಾನರ್ಜಿ, ಬಿಜೆಪಿ ಸರ್ಕಾರದ ದಾದಾಗಿರಿ ದೆಹಲಿ ಮಟ್ಟಕ್ಕಷ್ಟೇ ಸೀಮಿತವಾಗಿರಲಿ ಎಂದರು. ಕಾಂಗ್ರೆಸ್ ಪಕ್ಷವು ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲು ಆಗುತ್ತಿಲ್ಲ, ಇದರ ಪರಿಣಾಮ ದೇಶದ ರಾಜಕಾರಣದ ಮೇಲೆ ಬೀಳುತ್ತಿದೆ ಎಂದು ದೂರಿದ್ದಾರೆ.