Manglore News:
ಮೋದಿ ಇಂದು ಮಂಗಳೂರಿಗೆ ಆಗಮಿಸಲಿದ್ದಾರೆ.ಈ ಕಾರಣ ಬಂದೋಬಸ್ತ್ ಕಾರ್ಯಗಳು ನಡೆಯುತ್ತಿವೆ. ಇವುಗಳಿಂದ ಜನರಿಗೆ ಸಂಚಾರದಲ್ಲಿ ಕೊಂಚ ತೊಂದರೆಯಾಗಿದೆ.
ವಿವಿಧ ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಭದ್ರತೆ ಮ್ತು ಸುರಕ್ಷತೆಯ ನಿಟ್ಟಿನಲ್ಲಿ ನಗರಾದ್ಯಂತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಮೋದಿ ಭೇಟಿ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಮಾರ್ಪಾಡು ಮಾಡಲಾಗಿದ್ದು, ಇದರಿಂದ ಪ್ರಯಾಣಿಕರು, ಚಾಲಕರು ಪರದಾಡಿದರು.
ಮೋದಿ ಸಾರ್ವಜನಿಕರನ್ನುದ್ದೇಶಿಸಿ ನಗರದ ಗೋಲ್ಡ್‌ಫಿಂಚ್ ಮೈದಾನದಲ್ಲಿ ಮಾತನಾಡಲಿದ್ದು, ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಮತ್ತು ಯೋಜನೆಗಳ ಫಲಾನುಭವಿಗಳನ್ನು ಕರೆ ತರಲು 2 ಸಾವಿರಕ್ಕೂ ಅಧಿಕ ಬಸ್‌ಗಳ ವ್ಯವಸ್ಥೆಯನ್ನು ಜಿಲ್ಲೆಯಾದ್ಯಂತ ಮಾಡಲಾಗಿದೆ. ಹೀಗಾಗಿ ಹಲವು ಖಾಸಗಿ ಮತ್ತು ಸರ್ಕಾರಿ ಬಸ್‌ಗಳು ಕಾರ್ಯಕ್ರಮಕ್ಕೆ ನಿಯೋಜನೆಗೊಂಡಿರುವ ಕಾರಣ ನಿತ್ಯ ಪ್ರಯಾಣಿಕರು ಮತ್ತು ಅಗತ್ಯವಾಗಿ ಹೋಗಬೇಕಾದ ಇತರ ಪ್ರಯಾಣಿಕರು ಪರದಾಟ ನಡೆಸಿದರು. ಜಿಲ್ಲೆಯ ವಿವಿಧೆಡೆ ಬಸ್‌ಗಾಗಿ ಜನ ಕಾದು ಸುಸ್ತಾದ ಪ್ರಸಂಗವೂ ನಡೆಯಿತು. ಅಲ್ಲದೆ ಮಾರ್ಗ ಬದಲಾವಣೆ ಕಾರಣದಿಂದಾಗಿ ಕೆಲವು ಬಸ್‌ಗಳು ಕಾರ್ಯಾಚರಣೆಯನ್ನೂ ನಿಲ್ಲಿಸಿರುವ ಕಾರಣ ಪ್ರಯಾಣಿಕರು ಸಮಸ್ಯೆ ಅನುಭವಿಸಿದರು. ಕೆಲವರು ಕಿಲೋಮೀಟರ್ ಗಟ್ಟಲೆ ನಡೆದು ಸಾಗಿದ ಸಂದರ್ಭವೂ ನಡೆಯಿತು.
ಇನ್ನೊಂದೆಡೆ 3,800 ಕೋಟಿ ರೂ.ಗಳ ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸಕ್ಕೆ ಮಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿಯವರ ಭದ್ರತೆಯ ದೃಷ್ಟಿಯಿಂದ ಪೊಲೀಸ್ ಇಲಾಖೆಯಿಂದ ವ್ಯಾಪಕ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಪೊಲೀಸರು ಜಿಲ್ಲೆಯ ವಿವಿಧ ಕಡೆಗಳಲ್ಲಿ ಪ್ರತಿ ವಾಹನಗಳನ್ನು ತಪಾಸಣೆ ನಡೆಸಿಯೇ ಬಿಡುತ್ತಿದ್ದಾರೆ. ಮುಖ್ಯವಾಗಿ ಕೆಪಿಟಿ, ಕಾವೂರು, ಕೊಟ್ಟಾರಚೌಕಿ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ತಪಾಸಣೆ ಕೈಗೊಳ್ಳಲಾಗಿದೆ. ವಾಹನ ಪಾಸ್ ಇಲ್ಲದೆ ಕೊಟ್ಟಾರ ಚೌಕಿಯಿಂದಾಚೆಗೆ ಯಾವುದೇ ವಾಹನಗಳ ಪ್ರವೇಶಕ್ಕೆ ಪೊಲೀಸರು ಅನುಮತಿ ನೀಡುತ್ತಿಲ್ಲ.ಇದು ಜನರಿಗೆ ತೀವ್ರ ತೊಂದರೆಗೆ ಕಾರಣವಾದವು.
ಮಂಗಳೂರು: ಮೋದಿ ಕಾರ್ಯಕ್ರಮಕ್ಕೆ ಕಪ್ಪು ಬಟ್ಟೆ ತರುವಂತಿಲ್ಲ, ಧರಿಸುವಂತಿಲ್ಲ…!