Thursday, October 2, 2025

Latest Posts

RSS ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮೋದಿ ಭಾಗಿ – ವಿಶೇಷ ನಾಣ್ಯ ಹಾಗೂ ಅಂಚೆ ಚೀಟಿ ಬಿಡುಗಡೆ!

- Advertisement -

RSS 100 ವರ್ಷಗಳ ಪೂರೈಕೆಯನ್ನು ದೇಶಾದ್ಯಂತ ಭಾರೀ ಕಾರ್ಯಕ್ರಮಗಳೊಂದಿಗೆ ಆಚರಿಸುತ್ತಿದೆ. 1925 ಸೆಪ್ಟೆಂಬರ್ 27ರಂದು ಸ್ಥಾಪನೆಯಾದ ರಾಷ್ಟ್ರೀಯ ಸ್ವಯಂಸೇವಕ ಸಂಘ ತನ್ನ ಶತಮಾನೋತ್ಸವವನ್ನು ತ್ಯಾಗ, ಭಕ್ತಿ ಮತ್ತು ಸ್ಥಿತಿಸ್ಥಾಪಕತ್ವದ ನಿದರ್ಶನವಾಗಿ ಆಚರಿಸುವಂತೆ ಸಂಘದ ಹಿರಿಯರು ತಿಳಿಸಿದ್ದಾರೆ. ಅಕ್ಟೊಬರ್ 1 ರಂದು ನವದೆಹಲಿಯ ಡಾ. ಅಂಬೇಡ್ಕರ್ ಇಂಟರ್‌ನ್ಯಾಷನಲ್ ಸೆಂಟರ್‌ನಲ್ಲಿ RSS ಶತಮಾನೋತ್ಸವ ಸ್ಮರಣಾರ್ಥ ಕಾರ್ಯಕ್ರಮ ನಡೆದಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು. ಜೊತೆಗೆ ವಿಶೇಷ ಅಂಚೆ ಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಿ ಮಾತನಾಡಿದದರು. ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ‘ಭಾರತ ಮಾತೆ’ ಚಿತ್ರದೊಂದಿಗೆ ನಾಣ್ಯವನ್ನು ಮುದ್ರಿಸಲಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು. ನಾಣ್ಯದಲ್ಲಿ ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ‘ರಾಷ್ಟ್ರೀಯ ಸ್ವಯಂ ಸೇವಕ ಸಂಘ 100 ವರ್ಷ’ ಎಂದು ಉಲ್ಲೇಖಿಸಲಾಗಿದೆ.

ಭಾರತದ ವೈವಿಧ್ಯತೆಯಲ್ಲಿ ಏಕತೆಯ ನೀತಿಗೆ ನುಸಳುಕೋರರಿಂದ ಅಪಾಯವಿದೆ ಎಂದು ಹೇಳಿರುವ ಪ್ರಧಾನಿ ಮೋದಿ, ದೇಶದ ಒಗ್ಗಟ್ಟನ್ನು ಕಾಪಾಡುವ ಕೇಂದ್ರ ಸರ್ಕಾರದ ಪ್ರಯತ್ನಕ್ಕೆ ಕೈಜೋಡಿಸುವಂತೆ ಪ್ರಧಾನಿ ಮೋದಿ ಜನತೆಗೆ ಕರೆ ನೀಡಿದ್ದಾರೆ. ಪ್ರಧಾನಮಂತ್ರಿ ಮೋದಿ 1963 ರಲ್ಲಿ RSS ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ ಭಾಗವಹಿಸಿದ್ದುದನ್ನು ನೆನಪಿಸಿಕೊಂಡು, ಈ ಅಂಚೆ ಚೀಟಿಯು ಆ ಐತಿಹಾಸಿಕ ಕ್ಷಣದ ಚಿತ್ರಣವನ್ನೊಳಗೊಂಡಿದೆ ಎಂದಿದ್ದಾರೆ.

ವರದಿ : ಲಾವಣ್ಯ ಅನಿಗೋಳ

- Advertisement -

Latest Posts

Don't Miss