ವಾಷಿಂಗ್ಟನ್: ಪ್ರಧಾನಿ ಮೋದಿ ಅವರು ರಷ್ಯಾವು ಉಕ್ರೇನ್ ಮೇಲೆ ನಡೆಸುತ್ತಿರುವ ಯುದ್ಧವನ್ನು ಕೊನೆಗೊಳಿಸುವಂತೆ ಕರೆ ನೀಡಿದ್ದರು. ಈ ಬಗ್ಗೆ ಮಾತನಾಡಿರುವ ಅಮೆರಿಕದ ವಿದೇಶಾಂಗ ಇಲಾಖೆಯ ಪ್ರಧಾನ ಉಪ ವಕ್ತಾರ ವೇದಾಂತ್ ಪಟೇಲ್, ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಸ್ವಾಗತಿಸುತ್ತೇವೆ. ಇತರ ದೇಶಗಳು ರಷ್ಯಾದ ಬಗ್ಗೆ ತಮ್ಮದೇ ಆದ ನಿರ್ಧಾರವನ್ನು ತೆಗೆದುಕೊಳ್ಳುತ್ತಿವೆ. ಯುದ್ಧದ ಪರಿಣಾಮಗಳನ್ನು ತಗ್ಗಿಸಲು ಮಿತ್ರರಾಷ್ಟ್ರಗಳೊಂದಿಗೆ ಪರಸ್ಪರ ಒಳ್ಳೆಯ ಸಂಬಂಧ ಮುಂದುವರಿಸುತ್ತೇವೆ ಎಂದು ಹೇಳಿದರು.
ಚೀನಾ ಬಗ್ಗೆ ಚರ್ಚೆ ಯಾವಾಗ ಎಂದು ಮೋದಿಗೆ ಪ್ರಶ್ನೆ ಮಾಡಿದ ಮಲ್ಲಿಕಾರ್ಜುನ ಖರ್ಗೆ
ರಷ್ಯಾ-ಉಕ್ರೇನ್ ಯುದ್ಧವನ್ನು ಕೊನೆಗೊಳಿಸಲು ಆಸಕ್ತಿ ಹೊಂದಿರುವ ಯಾವುದೇ ದೇಶವಾದರೂ ಉಕ್ರೇನ್‍ನೊಂದಿಗೆ ನಿಕಟ ಸಂಪರ್ಕದಲ್ಲಿರಬೇಕು ಎಂದರು. ಪ್ರಧಾನಿ ಮೋದಿ ಶುಕ್ರವಾರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ ನಂತರ ವಿದೇಶಾಂಗ ಇಲಾಖೆಯು ಈ ಹೇಳಿಕೆಯನ್ನು ನೀಡಿದೆ.
ಭಾರತದಲ್ಲಿ ರಸ್ತೆ ಮೂಲಸೌಕರ್ಯವು 2024 ರ ವೇಳೆಗೆ ಯುಎಸ್ಎ ಗುಣಮಟ್ಟಕ್ಕೆ ಸಮನಾಗಿರುತ್ತದೆ: ನಿತಿನ್ ಗಡ್ಕರಿ