Sunday, September 8, 2024

Latest Posts

ನೂತನ ಸಂಸದರಿಂದ ಪ್ರಮಾಣ ವಚನ- ಲೋಕಸಭೆಯಲ್ಲಿ ಕನ್ನಡದ ಸೊಗಡು

- Advertisement -

18ನೇ ಲೋಕಸಭೆಯ ಅಧಿವೇಶನ ಆರಂಭವಾಗಿದ್ದು, ಮೊದಲ ದಿನ ನೂತನ ಸಂಸದರ ಪ್ರಮಾಣ ವಚನ ಸ್ವೀಕರಿಸಿದ್ರು.
ಹಂಗಾಮಿ ಸ್ಪೀಕರ್‌ ಭರ್ತೃಹರಿ ಮಹತಾಬ್ ಸಮ್ಮುಖದಲ್ಲಿ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ವಿದ್ಯುತ್ ಸಚಿವ ಮನೋಹರ್ ಲಾಲ್ ಖಟ್ಟರ್, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವ ಜಿತನ್ ರಾಮ್ ಮಾಝಿ ಸೇರಿದಂತೆ ಮೀನುಗಾರಿಕೆ ಮತ್ತು ಪಶುಸಂಗೋಪನೆ ಸಚಿವ ರಾಜೀವ್ ರಂಜನ್ ಸಿಂಗ್ ನೂತನ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು .
ಕೆಲವರು ಹಿಂದಿಯಲ್ಲಿ, ಇನ್ನು ಕೆಲವರು ಇಂಗ್ಲೀಷ್​ನಲ್ಲಿ, ಇನ್ನು ಕೆಲವು ಸಂಸದರು ಆಯಾ ರಾಜ್ಯದ ಆಡಳಿತ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಸಚಿವ ಹೆಚ್​.ಡಿ. ಕುಮಾರಸ್ವಾಮಿ, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ ಸೋಮಣ್ಣ ಅವರು ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿ ಗಮನ ಸೆಳೆದರು.
ಕುಮಾರಸ್ವಾಮಿ ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಬಳಿಕ ಎಕ್ಸ್​ ಖಾತೆಯಲ್ಲಿ ಖುಸಿ ವ್ಯಕ್ತಪಡಿಸಿರುವ ಕುಮಾರಸ್ವಾಮಿ, 18ನೇ ಲೋಕಸಭೆಯ ಸದಸ್ಯನಾಗಿ, ಮಂಡ್ಯ ಮಹಾಜನತೆಯ ಪ್ರತಿನಿಧಿಯಾಗಿ ಗೌರವಾನ್ವಿತ ಹಂಗಾಮಿ ಸಭಾಧ್ಯಕ್ಷರಾದ ಭರ್ತೃಹರಿ ಮಹತಾಬ್‌ ಅವರ ಸಮಕ್ಷಮದಲ್ಲಿ ನನ್ನ ಮಾತೃಭಾಷೆಯಾದ ಕನ್ನಡಲ್ಲಿ ಪ್ರಮಾಣ ಸ್ವೀಕರಿಸಿದೆ. ಇದು ನನ್ನ ಬದುಕಿನ ಅವಿಸ್ಮರಣೀಯ, ಹೆಮ್ಮೆಯ ಕ್ಷಣ ಎಂದು ಬರೆದುಕೊಂಡಿದ್ದಾರೆ.
ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಒಡಿಯಾ, ಬಂದರು ಮತ್ತು ಶಿಪ್ಪಿಂಗ್ ಸಚಿವ ಸರ್ಬಾನಂದ ಸೋನೋವಾಲ್ ಅಸ್ಸಾಮಿ ಭಾಷೆ, ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು, ಕಲ್ಲಿದ್ದಲು ಮತ್ತು ಗಣಿ ಸಚಿವ ಜಿ. ಕಿಶನ್ ರೆಡ್ಡಿ ತೆಲುಗಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ನೂತರು ಸಂಸದರು ಪ್ರಮಾಣ ವಚನ ಸ್ವೀಕರಿಸುವುದಕ್ಕೂ ಮುನ್ನ 18ನೇ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಹತಾಬ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.

- Advertisement -

Latest Posts

Don't Miss