www.karnatakatv.net: ನ.5 ರಂದು ಉತ್ತರಾಖಂಡದ ಕೇದಾರನಾಥಕ್ಕೆ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ ಎಂದು ಅಧಿಕೃತ ಮಾಹಿತಿ ತಿಳಿಸಿದೆ.
ಕೇದಾರನಾಥ್ ದೇವಾಲಯದಲ್ಲಿ ಪ್ರಧಾನಿ ಪ್ರಾರ್ಥನೆ ಸಲ್ಲಿಸಿ, ನಂತರ ಶ್ರೀ ಆದಿ ಶಂಕರಾಚಾರ್ಯ ಸಮಾಧಿ ಉದ್ಘಾಟನೆ ಮತ್ತು ಶ್ರೀ ಆದಿ ಶಂಕರಾಚಾರ್ಯರ ಪ್ರತಿಮೆ ಅನಾವರಣಗೊಳಿಸಲಿದ್ದಾರೆ. 2013 ರ ಪ್ರವಾಹದಲ್ಲಿ ನಾಶವಾದ ನಂತರ ಸಮಾಧಿಯನ್ನು ಪುನರ್ನಿರ್ಮಿಸಲಾಯಿತು. ವಿಧಾನಸಭೆ ಚುನಾವಣೆ ನಡೆಯಲಿರುವ ಉತ್ತರಾಖಂಡ ರಾಜ್ಯದಲ್ಲಿ ಯಾಲಿಯನ್ನು ಉದ್ದೇಶಿಸಿ ಮೋದಿ ಮಾತನಾಡಲಿದ್ದಾರೆ. 130 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದ ಪೂರ್ಣಗೊಂಡಿರುವ ಪ್ರಮುಖ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.
ಸಂಗಮ ಘಾಟ್, ಪ್ರಥಮ ಚಿಕಿತ್ಸಾ ಮತ್ತು ಪ್ರವಾಸಿ ಸೌಲಭ್ಯ ಕೇಂದ್ರ, ಆಡಳಿತ ಕಚೇರಿ ಮತ್ತು ಆಸ್ಪತ್ರೆ, ಎರಡು ಅತಿಥಿ ಗೃಹಗಳು, ಪೊಲೀಸ್ ಠಾಣೆ, ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್, ಮಂದಾಕಿನಿ ಆಸ್ಥಾಪತ್ ಸೇರಿದಂತೆ 180 ಕೋಟಿ ರೂ.ಗಳ ಬಹುವಿಧದ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಪ್ರಧಾನಿ ಸಚಿವಾಲಯ ತಿಳಿಸಿದೆ. ಸಮಾಧಿಯ ಮರುನಿರ್ಮಾಣವನ್ನು ಉಲ್ಲೇಖಿಸಿರುವ ಪಿಎಂಒ, ಮೋದಿ ಅವರ ಮಾರ್ಗದರ್ಶನದಲ್ಲಿ ಸಂಪೂರ್ಣ ಕೆಲಸವನ್ನು ಕೈಗೊಳ್ಳಲಾಗಿದ್ದು, ಅವರು ನಿರಂತರವಾಗಿ ಅದರ ಪ್ರಗತಿಯನ್ನು ಪರಿಶೀಲಿಸಿದ್ದಾರೆ ಮತ್ತು ಮೇಲ್ವಿಚಾರಣೆ ಮಾಡಿದ್ದಾರೆ ಎಂದು ಹೇಳಿದೆ.