state news:
ಜನವರಿ 19ರಂದು ಪ್ರಧಾನಿ ನರೇಂದ್ರ ಮೋದಿ ಉತ್ತರ ಕರ್ನಾಟಕ ಭಾಗದಲ್ಲಿ ಸಂಚಾರ ನಡೆಸಲಿದ್ದಾರೆ. ರಾಜ್ಯ ಚುನಾವಣೆಗೆ ಕೇವಲ 3 ತಿಂಗಳು ಮಾತ್ರ ಬಾಕಿ ಇದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮತ್ತೆ ಆಡಳಿತದ ಚುಕ್ಕಾಣಿ ಹಿಡಿಯಲು ಶತಾಯಗತಾಯ ಪ್ರಯತ್ನ ಮಾಡ್ತಿದ್ದಾರೆ. ಈ ಪೈಕಿ ರಾಜ್ಯದಲ್ಲಿ ಚುನಾವಣಾ ರಣಾಕಣ ಸದ್ಯ ರಂಗೇರಿದೆ. ಸದ್ಯ ಬಿಜೆಪಿ ಆಡಳಿತವನ್ನು ಸಾಧಿಸಲು ರಣತಂತ್ರ ಹೆಣೆದಿದ್ದು, ಪ್ರಧಾನಿ ಮೋದಿ ಉತ್ತರ ಕರ್ನಾಟಕ ಭಾಗದಲ್ಲಿ ಸಂಚಾರ ನಡೆಸಲಿದ್ದಾರೆ. ಯಾದಗಿರಿ ಜಿಲ್ಲೆಯ ಕೊಡೇಕಲ್‌ನಲ್ಲಿ ಬಂಜಾರ ಸಮುದಾಯದವರಿಗೆ ಹಕ್ಕು ಪತ್ರ ವಿತರಣೆ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಸಂಬಂಧ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಾಂತ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕೊಪ್ಪಳದಲ್ಲಿ ಇಂದು ಕಾಂಗ್ರೆಸ್ ಪ್ರಜಾಧ್ವನಿ ಕಾರ್ಯಕ್ರಮ : ಕೈ ನಾಯಕರ ಪ್ಲೆಕ್ಸ್ ಗಳಿಗೆ ಬಿಜೆಪಿ ವಿರೋಧ
ಜ. 21ರಿಂದ 29ರವರೆಗೆ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ : ಅಶ್ವತ್ಥನಾರಾಯಣ
ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಎಂದು ಅವರಿಗೆ ತಿಳಿದಿದೆ, ಜನರಿಗೆ ಸುಳ್ಳು ಭರವಸೆ ನೀಡುತ್ತಿದ್ದಾರೆ : ಆರಗ ಜ್ಞಾನೇಂದ್ರ