ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಕಾಶ್ಮೀರದಲ್ಲಿ ನಡೆದಿರುವ ಉಗ್ರರ ದಾಳಿಯನ್ನು ಖಂಡಿಸಿದ್ದಾರೆ.
ಜಮ್ಮು ಕಾಶ್ಮೀರ ದಲ್ಲಿ ಇತ್ತೀಚಿನ ದಿನದಲ್ಲಿ ಶಾಂತಿ ನೆಲೆಸಿತ್ತು. ಮೋದಿ,ಅಮಿತ್ ಶಾ ಅವರು ಕೈಗೊಂಡ ಕ್ರಮಗಳಿಂದ ಶಾಂತಿ ನೆಲಸಿತ್ತು. ಹೀಗಾಗಿ ಹೆಚ್ಚಿನ ಜನರು ಪ್ರವಾಸಿಗರು ಜಮ್ಮು ಕಾಶ್ಮೀರ ಕ್ಕೆ ಹೋಗಲು ಆರಂಭ ಮಾಡಿದ್ದರು. ಪಾಕಿಸ್ತಾನ ಪ್ರೋತ್ಸಾಹಿತ ಉಗ್ರಗಾಮಿಗಳು ದಾಳಿ ಮಾಡಿದ್ದಾರೆ. ಆ ಮೂಲಕ ಭಯದ ವಾತಾವರಣ ನಿರ್ಮಾಣ ಮಾಡ್ತಿದ್ದಾರೆ. ದೇಶದ ಜನತಗೆ ಕಾಶ್ಮೀರದಲ್ಲಿ ಶಾಂತಿ ನೆಲೆಸಬೇಕು ಅನ್ನೋ ಇಚ್ಚೆ ಹೊಂದಿದ್ದಾರೆ. ಮೃತ ಕುಟುಂಬದ ಜೊತೆಗೆ ದೇಶ, ಭಾರತ ಸರ್ಕಾರವಿದೆ.
ಉಗ್ರಗಾಮಿಗಳ ಹತ್ಯೆಯಾಗುತ್ತದೆ. ಭಾರತ ದೇಶ ಜಗತ್ತಿನಲ್ಲಿ ಪ್ರಬಲವಾಗಿ ಬೆಳೆಯುತ್ತಿದೆ. ಅದನ್ನು ಸಹಿಸಲು ಪಾಕಿಸ್ತಾನ ಕ್ಕೆ ಆಗ್ತಿಲ್ಲಾ.
ಪಾಕಿಸ್ತಾನ ಅವನತಿ ಆರಂಭವಾಗಿದೆ. ಹಿಂದೂಗಳನ್ನೇ ಟಾರ್ಗೆಟ್ ಮಾಡಿ ದಾಳಿ ಮಾಡಿದ್ದಾರೆ. ಮೋದಿ ಬಲಾಡ್ಯ ರಾಷ್ಟ್ರ ಕಟ್ಟುತ್ತಿದ್ದಾರೆ. ಮೋದಿ ಅವರು ಆದಷ್ಟು ಬೇಗ ಇದಕ್ಕೆ ತಕ್ಕ ಉತ್ತರ ಕೊಡ್ತಾರೆ. ಭದ್ರತಾ ವ್ಯವಸ್ಥೆ ಸರಿಯಿದೆ ಅಂತ ಪ್ರವಾಸಿಗರೇ ಹೇಳಿದ್ದಾರೆ. ಆದ್ರು ಈ ಘಟನೆಯಾಗಿದೆ. ಯಾವ ಸರ್ಕಾರ ಬಂದಾಗ ಕೂಡಾ ಜಮ್ಮು ಕಾಶ್ಮೀರದಲ್ಲಿ ಶಾಂತಿ ಇರಲಿಲ್ಲಾ. ಮೋದಿ ಅವರು ಅಧಿಕಾರಕ್ಕೆ ಬಂದ ಮೇಲೆ ಅಲ್ಲಿ ಶಾಂತಿ ನೆಲೆಸಿತ್ತು. ಉಗ್ರಗಾಮಿಗಳನ್ನು ನಾಶ ಮಾಡಬೇಕು. ಉಗ್ರಗಾಮಿಗಳ ನೆಲೆ ಪಾಕಿಸ್ತಾನ ದಲ್ಲಿರೋದನ್ನು ನಾಶ ಮಾಡಬೇಕು ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ.