Wednesday, November 13, 2024

Latest Posts

ಮೋದಿ ಸುಳ್ಳು ಹೇಳುವುದು ಹೊಸತಲ್ಲ, ಆದರೆ ಈ ಮಟ್ಟಿನ ಸುಳ್ಳು ನೀರಿಕ್ಷಿಸಿರಲಿಲ್ಲ: ಸಿಎಂ ಸಿದ್ದರಾಮಯ್ಯ

- Advertisement -

Political news: ಸದ್ಯ ಭಾರತದಲ್ಲಿ ಉಪಚುನಾವಣೆ ಪ್ರಚಾರ ಜೋರಾಗಿದ್ದು, ವಿಪಕ್ಷಗಳ ವಿರುದ್ಧ ನಾಯಕರು ಪರಸ್ಪರ ವಾಗ್ದಾಳಿ ನಡೆಸುತ್ತಿದ್ದಾರೆ. ಕಾಂಗ್ರೆಸ್ಸಿಗರು ಕರ್ನಾಟಕದ ಅಬಕಾರಿ ಇಲಾಖೆಯ ಹಣ ತಂದು ಮಹಾರಾಷ್ಟ್ರ ಚುನಾವಣೆಗೆ ಬಳಸಿಕೊಳ್ಳುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದು, ಈ ಮಾತಿಗೆ ಸಿಎಂ ಸಿದ್ದರಾಮಯ್ಯ ಪ್ರತ್ಯುತ್ತರ ನೀಡಿದ್ದಾರೆ. 

ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕರ್ನಾಟಕದಲ್ಲಿ ಅಬಕಾರಿ ಇಲಾಖೆಯ 700 ಕೋಟಿ ಹಣ ತಂದು ಮಹರಾಷ್ಟ್ರದಲ್ಲಿ ಕಾಂಗ್ರೆಸ್ ಚುನಾವಣೆ ನಡೆಸುತ್ತಿದೆ ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಅವರ ಸ್ಥಾನಕ್ಕೆ ಅಗೌರವ ತರುವಂತದ್ದು. ಅಬಕಾರಿ ಇಲಾಖೆಯಲ್ಲಿ ₹700 ಕೋಟಿ ಎಲ್ಲಿರತ್ತೆ. ಯಾರು ಕೊಡ್ತಾರೆ? ಪ್ರಧಾನಿ ಆದವರಿಗೆ ಈ ಮಟ್ಟದ ಅಜ್ಞಾನ ಇರಬಾರದು. ಮೋದಿಯವರು ಸುಳ್ಳು ಹೇಳೋದು ಹೊಸ ವಿಷಯ ಏನಲ್ಲ. ಆದರೆ ಈ ಮಟ್ಟದ ಸುಳ್ಳು ನಿರೀಕ್ಷೆ ಮಾಡಿರಲಿಲ್ಲ.

30 ವರ್ಷಗಳ ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ತಮ್ಮ ಕೊಲೆಗೆ ಯತ್ನ ನಡೆದಿತ್ತು ಎಂದು ಯಡಿಯೂರಪ್ಪ ಅವರು ಈಗ ಹೇಳುತ್ತಿದ್ದಾರೆ. ಆಗ ಏಕೆ ದೂರು ಕೊಡಲಿಲ್ಲ? ಕೇಸು ಹಾಕಿಸಲಿಲ್ಲ? ಚುನಾವಣೆ ಬಂದಾಗ ಇಂಥ ಹೇಳಿಕೆ ನೀಡಿದರೆ ಅದರಿಂದ ರಾಜಕೀಯ ಲಾಭ ಆಗುತ್ತೆ ಎನ್ನುವುದು ಅವರ ಲೆಕ್ಕಾಚಾರ ಇರಬಹುದು ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

- Advertisement -

Latest Posts

Don't Miss