ಮಲಯಾಳಂ ಸಿನಿಮಾ ಇಂಡಸ್ಟ್ರಿಯಲ್ಲಿ ಕೇಳಿಬರುತ್ತಿರುವ ಲೈಂಗಿಕ ದೌರ್ಜನ್ಯ ಪ್ರಕರಣದ ವಿಷಯಕ್ಕೆ ಸಂಬಂಧಿಸಿದಂತೆ, ಅಲ್ಲಿನ ಕಲಾವಿದರ ಸಂಘದ ಅಧ್ಯಕ್ಷ ಸ್ಥಾನಕ್ಕೆ ನಟ ಮೋಹನ್ ಲಾಲ್ ಅವರು ತಮ್ಮ ರಾಜಿನಾಮೆ ಸಲ್ಲಿಸಿದ್ದಾರೆ. ಈ ಬೆಳವಣಿಗೆಯ ಹಿಂದೆಯೇ, ಅಮ್ಮ ಸ್ಥಾನದಲ್ಲಿದ್ದ ಹದಿನೇಳು ಮಂದಿ ಪದಾಧಿಕಾರಿಗಳು ಹಾಗು ಸದಸ್ಯರು ಕೂಡ ರಾಜಿನಾಮೆ ನೀಡಿದ್ದಾರೆ.
ಮಲಯಾಳಂ ಚಿತ್ರರಂಗದಲ್ಲಿ ದುಡಿಯುತ್ತಿರುವ ಮಹಿಳಾ ವೃತ್ತಿಪರರ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಬಗ್ಗೆ ಹೇಮಾ ಸಮಿತಿ ವರದಿ ಮಾಡಿತ್ತು. ಅದರ ಬೆನ್ನಲ್ಲೇ ಎಲ್ಲೆಡೆ ಪರ ಮತ್ತು ವಿರೋಧ ಚರ್ಚೆಗಳು ನಡೆದಿದ್ದವು. ಕಲಾವಿದರ ಸಂಘದ ಮೇಲೂ ಬೊಟ್ಟು ತೋರಿಸಲಾಗಿತ್ತು. ನಟಿ ರೇವತಿ ಅವರು ಕಲಾವಿದರ ಸಂಘದ ಪ್ರಧಾನ ಕಾರ್ಯದರ್ಶಿ ಸಿದ್ಧಿಕ್ ಅವರ ಮೇಲೆ ಆರೋಪ ಮಾಡಿದ್ದರು. ಸಿದ್ಧಿಕ್ ಕೂಡಲೇ ತಮ್ಮ ಸ್ಥಾನಕ್ಕೆ ರಾಜಿವನಾಮೆ ನೀಡಿದ್ದರು. ಅದರ ಬೆನ್ನಹಿಂದೆಯೇ ಮಲಯಾಳಂ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ರಂಜಿತ್ ಅವರು ಸಹ ರಾಜಿನಾಮೆ ನೀಡಿದ್ದರು. ಈಗ ಮೋಹನ್ ಲಾಲ್ ಅವರು ಕೂಡ ರಾಜಿನಾಮೆ ಸಲ್ಲಿಸಿದ್ದಾರೆ. ಅವರೊಂದಿಗೆ ಇತರೆ ಹದಿನೇಳು ಮಂದಿ ಕೂಡ ರಾಜಿನಾಮೆ ನೀಡಿ ಹೊರ ನಡೆದಿದ್ದಾರೆ.
ಮಲಯಾಳಂ ಸಿನಿಮಾ ಇಂಡಸ್ಟ್ರಿಯಲ್ಲಿ ಎದ್ದಿರುವ ಲೈಂಗಿಕ ದೌರ್ಜನ್ಯದ ಸುದ್ದಿಗೆ ಒಬ್ಬೊಬ್ಬರೇ ಸರ್ಕಾರ ಹಾಗು ಸರ್ಕಾರೇತರ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಮ್ಮ ಸ್ಥಾನಗಳಿಗೆ ರಾಜಿನಾಮೆ ಸಲ್ಲಿಸುತ್ತಿದ್ದಾರೆ. ಇತ್ತೀಚೆಗೆ ಮಲಯಾಳಂ ಚಿತ್ರರಂಗದಲ್ಲಿ ಮಹಿಳಾ ವೃತ್ತಿಪರರ ಮೇಲೆ ಆಗುತ್ತಿರುವ ಲೈಂಗಿಕ ದೌರ್ಜನ್ಯ ಕುರಿತು ಹೇಮಾ ಸಮಿತಿ ವರದಿ ಹೊರಬಂದಿತ್ತು. ಅದರ ಬೆನ್ನಲ್ಲೇ ಸಾಕಷ್ಟು ಪರ ವಿರೋಧಗಳ ಚರ್ಚೆಗಳು ನಡೆದಿದ್ದವು. ಅದಕ್ಕೂ ಮುಂದೆ ಹೋಗಿದ್ದ ಈ ವಿಷಯಕ್ಕೆ ಸಂಬಂಧಿಸಿದಂತೆ, ಒಂದಿಷ್ಟು ನಟಿಯರು ಕೂಡ ಮಲಯಾಳಂ ಚಿತ್ರರಂಗದ ಬಗ್ಗೆ ಮಾತಾಡಿದ್ದರು.
ನಟಿ ಪಾರ್ವತಿ ಕೂಡ ಈ ಬಗ್ಗೆ ಪ್ರತಿಕ್ರಿಯಿಸಿ, ಮಲಯಾಳಂ ಚಿತ್ರರಂಗದ ಬಗ್ಗೆ ವಿನಾಕಾರಣ ಆರೋಪ ಮಾಡುವುದು ಸರಿಯಲ್ಲ. ಅಲ್ಲಿ ನಾನೂ ಇದ್ದೇನೆ. ನನಗೆ ಅಂತಹ ಅನುಭವ ಆಗಿಲ್ಲ. ಅದರಲ್ಲೂ ಅಲ್ಲಿ ಆ ರೀತಿಯ ವ್ಯವಸ್ಥೆ ಇಲ್ಲ ಎಂದಿದ್ದರು.
ಅದೇನೆ ಇರಲಿ, ಸದ್ಯ ಮಲಯಾಳಂ ಸಿನಿಮಾ ಇಂಡಸ್ಟ್ರಿಯಲ್ಲಿ ದೊಡ್ಡ ಬಿರುಗಾಳಿ ಎದ್ದಿದೆ. ಅಲ್ಲಿನ ಸಿನಿಮಾ ರಂಗದಲ್ಲಿ ಕೆಲಸ ಮಾಡುವ ಅನೇಕ ಮಹಿಳೆಯರು ಲೈಂಗಿಕ ದೌರ್ಜನ್ಯ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಅಲ್ಲಿನ ಹೇಮಾ ಸಮಿತಿ ವರದಿ ನೀಡಿತ್ತು. ಈಗ ಅದು ದೊಡ್ಡ ಮಟ್ಟದ ಸುದ್ದಿಯಾಗಿದ್ದರಿಂದ ಅಲ್ಲಿನ ಸರ್ಕಾರ ಕೂಡ ಪೊಲೀಸರ ಜೊತೆ ಸಭೆ ನಡೆಸಿ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ.