Thursday, December 26, 2024

Latest Posts

ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ-ಮಗಳು ಬಲಿ

- Advertisement -

Bengaluru: ಬೆಂಗಳೂರು: ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ-ಮಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್‌ನ ಕಾಡುಗೋಡಿಯಲ್ಲಿ ನಡೆದಿದೆ.

ತಾಯಿ ಸೌಂದರ್ಯ ಹಾಗೂ ಮಗಳು ಲೀಲಾ ಸಾವನ್ನಪ್ಪಿದ ದುರ್ದೈವಿಗಳು. ತಮಿಳುನಾಡು ಮೂಲದ ಇವರು ಕಾಡುಗೋಡಿಯ ಗೋಪಾಲ್ ಕಾಲೋನಿಯಲ್ಲಿ ವಾಸವಾಗಿದ್ದರು. ಇಂದು ಬೆಳಗಿನ ಜಾವ 5 ಗಂಟೆ ವೇಳೆಗೆ ದುರ್ಘಟನೆ ನಡೆದಿದೆ. ನೆಲದಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ಕಾಣಿಸದೇ ಅದನ್ನು ತುಳಿದ ಕಾರಣ ವಿದ್ಯುತ್ ಪ್ರವಹಿಸಿ ಇಬ್ಬರು ಸಾವನ್ನಪ್ಪಿದ್ದಾರೆ.

ದೀಪಾವಳಿ ಹಬ್ಬಕ್ಕೆ ಚೆನ್ನೈಗೆ ಹೋಗಿದ್ದ ಸೌಂದರ್ಯ, ಪತಿ ಸಂತೋಷ್ ಹಾಗೂ 9 ತಿಂಗಳ ಕಂದಮ್ಮ ಲಿಯಾ ಇಂದು ಮುಂಜಾನೆ ಬೆಂಗಳೂರಿಗೆ ವಾಪಸಾಗುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ದಾರಿಯಲ್ಲಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಗಮನಿಸದೇ ಅದನ್ನು ಸೌಂದರ್ಯ ತುಳಿದಿದ್ದರು. ಈ ವೇಳೆ ಪತಿ ಸಂತೋಷ್ ಕೈಗೆ ವಿದ್ಯುತ್ ಶಾಕ್ ಹೊಡೆದು ಅದೃಷ್ಟವಶಾತ್ ಅವರು ಪಕ್ಕಕ್ಕೆ ಬಿದ್ದಿದ್ದರು. ಆದರೆ ಪತಿ ಎದುರೇ ಪತ್ನಿ ಹಾಗೂ ಕಂದಮ್ಮ ವಿದ್ಯುತ್ ಶಾಕ್‌ಗೆ ಸುಟ್ಟು ಕರಕಲಾಗಿದ್ದಾರೆ.

ಈ ಬಗ್ಗೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂವರು ಬೆಸ್ಕಾಂ ಅಧಿಕಾರಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಎಇ ಚೇತನ್, ಎಇಇ ಸುಬ್ರಮಣಿ ಹಾಗೂ ಇಇ ಶ್ರೀ ರಾಮನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಭಾರತ ವಿಶ್ವಕಪ್‌ ಗೆದ್ದರೆ 100 ಕೋಟಿ ರೂ ಬಂಪರ್‌ ಬಹುಮಾನ!: ಆಸ್ಟ್ರೋಟಾಕ್‌ ಸಿಇಒ ಘೋಷಣೆ

ಇಸ್ರೇಲ್ ಪ್ರಧಾನಿಯನ್ನು ಗುಂಡಿಕ್ಕಿ ಕೊಲ್ಲಬೇಕು ಎಂದ ಕಾಂಗ್ರೆಸ್ ಸಂಸದ.

ತಲೆತಲಾಂತರದಿಂದ ಮಠದ ಭಕ್ತರಾದ ನಾವು ಮುರುಘಾ ಶರಣರ ಜೊತೆ ಇರುತ್ತೇವೆ; ಶಾಸಕ ವಿರೇಂದ್ರ ಪಪ್ಪಿ

- Advertisement -

Latest Posts

Don't Miss