Sunday, October 5, 2025

Latest Posts

ವಾಹನ ಸವಾರರೇ ಹುಷಾರ್!: ಬೆಂಗಳೂರಲ್ಲಿ ಮತ್ತೆ ಟೋಯಿಂಗ್ ಶುರು

- Advertisement -

ಸಿಲಿಕಾನ್‌ ಸಿಟಿಯ ವಾಹನ ಸವಾರರೇ ಎಚ್ಚರ. ಇನ್ನು ಮುಂದೆ ಬೇಕಾಬಿಟ್ಟಿ ರಸ್ತೆಗಳ ಅಕ್ಕಪಕ್ಕ ವಾಹನ ನಿಲುಗಡೆ ಮಾಡುವ ಹಾಗಿಲ್ಲ. ಹೌದು, ಆಗಸ್ಟ್ ತಿಂಗಳ ಅಂತ್ಯದೊಳಗಾಗಿ ಮತ್ತೆ ಬೆಂಗಳೂರಿನಲ್ಲಿ ಟೋಯಿಂಗ್ ಆರಂಭಿಸಲಾಗುತ್ತೆ. ಈ ಬಗ್ಗೆ ಸ್ವತಃ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರೇ ತಿಳಿಸಿದ್ದಾರೆ.

ವಾಹನ ಟೋಯಿಂಗ್ ಕುರಿತಾಗಿ ಮಾತನಾಡಿದ ಪರಮೇಶ್ವರ್ ಅವರು, ಬೆಂಗಳೂರು ನಗರದಲ್ಲಿ ಇಲಾಖೆ ವತಿಯಿಂದ ಟೋಯಿಂಗ್ ಆರಂಭಿಸುತ್ತೇವೆ. ಈ ಹಿಂದೆ ಗುತ್ತಿಗೆ ನೀಡಲಾಗಿತ್ತು. ಈ ಬಾರಿ ಪೊಲೀಸರೇ ಟೋಯಿಂಗ್ ಮಾಡುತ್ತಾರೆ.

ಯಾವುದೇ ಕಂಪನಿಗೆ ಗುತ್ತಿಗೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದಾರೆ. ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸುತ್ತಿರುವುದರಿಂದ ಟ್ರಾಫಿಕ್‌ಗೆ ಸಮಸ್ಯೆಯಾಗುತ್ತಿದೆ. ಎಲ್ಲಿ ಪಾರ್ಕಿಂಗ್ ಆಗಬಾರದು ಎಂಬ ನಿಯಮ ಇರುತ್ತದೆಯೋ, ಜನರು ಅಲ್ಲಿಯೇ ವಾಹನಗಳನ್ನು ಪಾರ್ಕಿಂಗ್ ಮಾಡಿರುತ್ತಾರೆ. ಅಂತ ಸಂದರ್ಭದಲ್ಲಿ ಎನು ಮಾಡಬೇಕು. ಜನ ಓಡಾಡಲು ರಸ್ತೆ ಮಾಡಿದ್ದಾರೆ. ಪಾರ್ಕಿಂಗ್ ಮಾಡಲು ಅಲ್ಲ ಎಂದು ಹೇಳಿದ್ದಾರೆ.
ಈ ಹಿಂದೆ ಬೆಂಗಳೂರು ನಗರ ಉಸ್ತುವಾರಿ ಸಚಿವನಾದ್ದಾಗ ಸಂದರ್ಭದಲ್ಲಿಯೂ ಈ ಪ್ರಶ್ನೆ ಬಂದಿತ್ತು ಎಂದ ಅವರು, ಪೊಲೀಸರು ಜನರೊಂದಿಗೆ ಮಾನವೀಯತೆಯಿಂದ ವರ್ತಿಸುವಂತೆ ಸೂಚಿಸುತ್ತೇನೆ. ಜಟಾಪಟಿಯಾದರೆ ಕಾನೂನು ಇಲ್ಲವೇ? ಎಂದು ಎಚ್ಚರಿಸಿದ್ದಾರೆ. ಈ ಹಿಂದೆ ಟೋಯಿಂದ ಸಂಸ್ಥೆಯಿಂದ ಸಾರ್ವಜನಿಕರ ಜೊತೆಗೆ ಅಮಾನವೀಯವಾಗಿ ನಡೆದುಕೊಂಡಿದ್ದ ಪ್ರಕರಣಗಳು ಆಗಿದ್ದವು. ಟೋಯಿಂಗ್ ಮಾಡುವವರಿಗೂ ಸಾರ್ವಜನಿಕರಿಗೆ ಸಂಘರ್ಷ ಉಂಟಾಗಿದ್ದವು. ಈ ನಿಟ್ಟಿನಲ್ಲಿ ಈ ಬಾರಿ ಅದಕ್ಕೆ ಅವಕಾಶ ಕೊಡದಂತೆ ಎಚ್ಚರಿಕೆ ವಹಿಸುವ ಭರವಸೆಯನ್ನು ಗೃಹ ಸಚಿವರು ನೀಡಿದ್ದಾರೆ.

 

ವರದಿ:ರಂಜಿತ ರೇವಣ್ಣ ನಾಟನಹಳ್ಳಿ

- Advertisement -

Latest Posts

Don't Miss