Movie News: ನಟ ಚೇತನ್ ಚಂದ್ರ ಮೇಲೆ ಮಾರಣಾಂತಿಕ ಹಲ್ಲೆ

Movie News: ತಮ್ಮ ಬೈಕ್‌ಗೆ ನಟನ ಬೈಕ್ ಟಚ್ ಆಯಿತೆಂದು ಸಿಟ್ಟಿಗೆದ್ದ ಕಿಡಿಗೇಡಿಗಳು ನಟ ಚೇತನ್ ಚಂದ್ರನ ಬೈಕ್‌ನ್ನು ಅಟ್ಟಾಡಿಸಿಕೊಂಡು ಬಂದು ಹಲ್ಲೆ ಮಾಡಿದ ಘಟನೆ ನಡೆದಿದೆ. ಬೆಂಗಳೂರಿನ ಕಗ್ಗಲಿಪುರದಲ್ಲಿ ಈ ಘಟನೆ ನಡೆದಿದ್ದು, ಚೇತನ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.

ಚೇತನ್ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು, ಗಾಡಿ ತಾಗಿತೆಂಬ ನೆಪದಲ್ಲಿ ಗಾಡಿಗೆ ಅಡ್ಡ ಹಾಕಿ, ಹಣ ಕೀಳಲು ಬಂದಿದ್ದರು. ನಾನು ದುಡ್ಡು ಕೊಡುವುದಿಲ್ಲವೆಂದು ಹೇಳಿದ್ದಕ್ಕೆ, ಗಾಡಿ ಅಡ್ಡಗಟ್ಟಿ, ರಕ್‌ತ ಬರುವ ಹಾಗೆ ನನ್ನ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ನಿನ್ನೆ ಅಮ್ಮಂದಿರ ದಿನದ ಪ್ರಯುಕ್ತ ಅಮ್ಮನನ್ನು ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ, ಬರುತ್ತಿದ್ದ ವೇಳೆ ಕಗ್‌ಗಲಿಪುರದಲ್ಲಿ ಈ ಘಟನೆ ನಡೆದಿದೆ. ಘಟನೆ ಬಳಿಕ ಚೇತನ್ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದಿದ್ದು, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಭಾರತಕ್ಕೆ ಭೇಟಿ ನೀಡಿ ಕ್ಷಮೆ ಕೇಳಲಿದ್ದಾರೆ ಮಾಲ್ಡೀವ್ಸ್ ವಿದೇಶಾಂಗ ಸಚಿವರು

ಚಿಕನ್ ಶವರ್ಮಾ ತಿಂದು ಓರ್ವ ಯುವಕ ಸಾವು: ಐವರ ಸ್ಥಿತಿ ಗಂಭೀರ

Kidnap case: ಮೇ 14ರವರೆಗೆ ಹೆಚ್.ಡಿ.ರೇವಣ್ಣಗೆ ನ್ಯಾಯಾಂಗ ಬಂಧನ

About The Author