ಕೋಲಾರ: ಮುಂಬರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಹಿನ್ನೆಲೆ, ಅಭ್ಯರ್ಥಿಗಳ ಆಯ್ಕೆಗಾಗಿ ನನ್ನನ್ನು ಕೋಲಾರ ಜಿಲ್ಲೆಗೆ ಕಳುಹಿಸಿದ್ದಾರೆ. ಒಳ್ಳೆ ರೀತಿಯಲ್ಲಿ ತಾಲೂಕು ಮಟ್ಟದ ಸಭೆಗಳು ನಡೆಯುತ್ತಿವೆ. ಸದ್ಯ ಚುನಾವಣೆ ಘೋಷಣೆಯಾಗಿದ್ದು, ಒಳ್ಳೆಯ ವಾತಾವರಣ ಇದೆ. ಕೋಲಾರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಹೇಳಿಕೆ ನೀಡಿದ್ದಾರೆ.
ಜಿಲ್ಲೆಯ ಆರೂ ಕ್ಷೇತ್ರಗಳಲ್ಲಿ ಪೈಪೋಟಿ ಹೆಚ್ಚಿದೆ. ಈ ಬಾರಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತಿದ್ದೇವೆ. ರಾಜ್ಯದಲ್ಲಿ 150 ಸ್ಥಾನ ತಲುಪುವ ಗುರಿ ಹೊಂದಿದ್ದೇವೆ. ಈ ಬಾರಿ ಚುನಾವಣೆಯಲ್ಲಿ ಕೋಲಾರ ಜಿಲ್ಲೆಯಿಂದ ಹೆಚ್ಚಿನ ಶಾಸಕರು ಆಯ್ಕೆಯಾಗುತ್ತಾರೆ. ನಾನು ಸಂಸದನಾಗಿ ಪಕ್ಷ ಕಟ್ಟುವ ಕೆಲಸ ಮಾಡಿತ್ತೇನೆ. ನಾನು ಸಂಸದನಾಗಿ ಆಯ್ಕೆಯಾಗುವಲ್ಲಿ ಶಿಕಾರಿಪುರ ಕ್ಷೇತ್ರದ ಜನ ಆಶೀರ್ವಾದ ಇದೆ ಎಂದಿದ್ದಾರೆ.
ಅಲ್ಲದೇ, ವಿಜಯೇಂದ್ರ ಇಲ್ಲೇ ಸ್ಪರ್ಧಿಸಬೇಕೆಂದು ಜನರ ಒತ್ತಾಯವೂ ಇದೆ. ಕಾಂಗ್ರೆಸ್ ಪಕ್ಷ ಯಾವುದೇ ನೈತಿಕತೆಯನ್ನು ಉಳಿಸಿಕೊಂಡಿಲ್ಲ. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಆಗಿದೆ. ದೇಶವನ್ನು ಕಾಂಗ್ರೆಸ್ ನವರು ಹೇಗೆ ನಡೆಸಿಕೊಂಡಿದ್ದಾರೆ ಎಂದು ಗೊತ್ತಿದೆ. ಕಾಂಗ್ರೆಸ್ ಪಕ್ಷ ಜನರಿಂದ ಮರೆಯಾಗುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ವ್ಯಂಗ್ಯವಾಡಿದ್ದಾರೆ.
ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಅನಧಿಕೃತ ಹಣ ವಹಿವಾಟು / ಖರ್ಚಿನ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ .