Political News: ಸಂಸದ ಡಿ.ವಿ.ಸದಾನಂದ ಗೌಡರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಕರೆ ಮಾಡಿ, ನೀವು ಲೋಕಸಭೆಯಿಂದ ದೂರವಿರಿ. ಇನ್ನು ನೀವು ಚುನಾವಣೆಗೆ ಸ್ಪರ್ಧಿಸುವುದು ಬೇಡ. ಚುನಾವಣೆ ಪ್ರಚಾರಕ್ಕೆ ತಯಾರಿ ಮಾಡಿಕೊಳ್ಳಿ ಎಂದಿದ್ದಾರೆ ಎಂಬ ಸುದ್ದಿ ಇದೆ. ಹಾಗಾಗಿ ಸದಾನಂದಗೌಡರಿಗೆ ಈ ಬಾರಿ ಚುನಾವಣೆಗೆ ಟಿಕೇಟ್ ಸಿಗುವುದಿಲ್ಲವೆಂದು ಹೇಳಲಾಗಿದೆ.
ಇನ್ನು ಸದಾನಂದಗೌಡರು ತಮ್ಮ ಟ್ವೀಟರ್‌ನಲ್ಲಿ ಪೋಸ್ಟ್ ಮಾಡಿದ್ದು, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ನನ್ನೆಲ್ಲಾ ಪ್ರೀತಿಯ ಬಂಧುಗಳೇ.. ನನಗೆ ಕಳೆದ 10 ವರ್ಷಗಳ ಕಾಲ ಈ ಕ್ಷೇತ್ರದ ಲೋಕಸಭಾ ಸದಸ್ಯನಾಗಿ, ನಿಮ್ಮ ಕೆಲಸವನ್ನು ಮಾಡಿಕೊಡುವ ಅವಕಾಶ ಮಾಡಿಕೊಟ್ಟು ಆಶೀರ್ವಾದ ಮಾಡಿದ್ದೀರಿ. ನಾನು ನನ್ನ ಶಕ್ತಿ ಮೀರಿ, ನಿಮ್ಮ ಸೇವೆಯನ್ನು ಮಾಡುವ ಪ್ರಯತ್ನ ಮಾಡಿದ್ದೇನೆ. ನಿಮ್ಮ ಆಶೀರ್ವಾದದಿಂದ ಕೇಂದ್ರದಲ್ಲಿ ನಮ್ಮೆಲ್ಲರ ಪ್ರೀತಿಯ ಪ್ರಧಾನಮಂತ್ರಿ, ಶ್ರೀನರೇಂದ್ರ ಮೋದಿ ಅವರ ಜೊತೆಯಲ್ಲಿ, 7 ವರ್ಷಗಳ ಕಾಲ ಕ್ಯಾಬಿನೇಟ್ ಮಂತ್ರಿಯಾಗಿ ಕೆಲಸ ಮಾಡುವ ಅವಕಾಶವನ್ನು ಕೂಡ ಕಲ್ಪಿಸಿದ್ದೀರಿ. ನಾನು ನಿಮ್ಮೆಲ್ಲರಿಗೂ ಚಿರಋಣಿ. ಇನ್ನು ಮುಂದೆಯೂ ನಾನು ನಿಮ್ಮ ಜೊತೆ ಇರುತ್ತೇನೆ. ಎಲ್ಲರಿಗೂ ನನ್ನ ಅಂತರಾಳದ ಹೃದಯ ತುಂಬಿದ ಧನ್ಯವಾಾದಗಳು. ಇಂತಿ ನಿಮ್ಮವನೇ ಆದ ಡಿ.ವಿ.ಸದಾನಂದಗೌಡ ಎಂದು ಬರೆದುಕೊಂಡಿದ್ದಾರೆ.
ಈ ಮೂಲಕ ತಾನು ಚುನಾವಣೆಯಲ್ಲಿ ಸ್ಪರ್ಧಿಸದಿದ್ದರೂ, ಬಿಜೆಪಿ ಪರ ಕ್ಯಾಂಪೇನ್ ಮಾಡುವುದಾಗಿ ಸದಾನಂದಗೌಡ ಪರೋಕ್ಷವಾಗಿ ಹೇಳಿದ್ದಾರೆ. ಮೋದಿ ಸರ್ಕಾರ ಬಂದಾಗಿನಿಂದ ಎರಡು ಬಾರಿ ಸ್ಪರ್ಧಿಸಿ, ಸಂಸದರಾದವರಿಗೆ, ಈ ಬಾರಿ ಟಿಕೇಟ್ ನೀಡುವುದು ಡೌಟ್ ಎನ್ನಲಾಗಿದೆ. ಹಾಗಾಗಿ ಸದಾನಂದ ಗೌಡ ಸೇರಿ, ಪ್ರತಾಪ್ ಸಿಂಹ, ನಳೀನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ ಸೇರಿ ಇನ್ನೂ ಹಲವರಿಗೆ ಟಿಕೇಟ್ ಕೈ ತಪ್ಪುವ ಸಾಧ್ಯತೆ ಇದೆ.
— Sadananda Gowda ( Modi Ka Parivar ) (@DVSadanandGowda) March 13, 2024
ಯುವರಾಜರೇ ರಾಜರಾಗಿರಿ ಮಂತ್ರಿಯಾಗಬೇಡಿ: ಯದುವೀರ್ ಒಡೆಯರ್ ಅಭಿಮಾನಿಗಳ ಅಭಿಯಾನ
ಸರಕಾರಿ ಕಾರ್ಯಕ್ರಮಕ್ಕೆ ಬರದಿದ್ದರೆ ಗ್ಯಾರಂಟಿ ಯೋಜನೆ ಬಂದ್: ಅಂಗನವಾಡಿ ಕಾರ್ಯಕರ್ತೆಯ ‘ಗ್ಯಾರಂಟಿ’ ಬೆದರಿಕೆ