Thursday, June 19, 2025

Latest Posts

ಇ.ಡಿ ಇಕ್ಕಳದಲ್ಲಿ ಕೈ ಸಂಸದ, ಶಾಸಕರು : ಬೆಳಂಬೆಳಿಗ್ಗೆ ದಾಳಿ ನಡೆಸಿ ದಾಖಲೆಗಳ ತಲಾಶ್

- Advertisement -

Political News: ಬೆಳಂಬೆಳಿಗ್ಗೆ ಬಳ್ಳಾರಿ ಭಾಗದ ಜನಪ್ರತಿನಿಧಿಗಳ ಮನೆ ಹಾಗೂ ಕೆಚೇರಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಪ್ರಮುಖವಾಗಿ ವಾಲ್ಮೀಕಿ ನಿಗಮದ ಹಗರಣದ ಹಣವನ್ನು ಬಳ್ಳಾರಿ ಚುನಾವಣೆಗೆ ಅಕ್ರಮವಾಗಿ ಹಂಚಿಕೆ ಮಾಡಿz ದುರುಪಯೋಗ ಮಾಡಿಕೊಂಡ ಆರೋಪದ ಮೇಲೆ ಇ.ಡಿ ಅಧಿಕಾರಿಗಳು ಸಂಸದ ಇ.ತುಕಾರಾಮ್, ಶಾಸಕ ಭರತ್ ರೆಡ್ಡಿ ಸೇರಿದಂತೆ ಹಲವರ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ.

ನಾಲ್ಕು ಇನ್ನೋವಾ ಕಾರುಗಳಲ್ಲಿ ಆಗಮಿಸಿರುವ ಅಧಿಕಾರಿಗಳ ತಂಡ..

ನಾಲ್ಕು ಇನ್ನೋವಾ ಕಾರುಗಳಲ್ಲಿ ಆಗಮಿಸಿರುವ ಇ.ಡಿ. ಅಧಿಕಾರಿಗಳು ಬುಧವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ. ಸಂಸದ ಇ. ತುಕಾರಾಂ, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಕಂಪ್ಲಿ ಶಾಸಕ ಜೆ.ಎನ್ ಗಣೇಶ್, ಶಾಸಕ ಬಿ. ನಾಗೇಂದ್ರ ಅವರ ಆಪ್ತ ಗೋವರ್ಧನ್ ರೆಡ್ಡಿ ಸೇರಿದಂತೆ ಹಲವರಿಗೆ ಸಂಬAಧಿಸಿದ ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆದಿದೆ.

ವಾಲ್ಮೀಕಿ ಅಭಿವೃದ್ದಿ ನಿಗಮದ ಹಗರಣದ ತನಿಖೆ..

ಇನ್ನೂ ಇ.ಡಿ ಅಧಿಕಾರಿಗಳು ಪರಿಶೀಲನೆಯಲ್ಲಿ ತೊಡಗಿದ್ದಾರೆ. ದಾಳಿ ಸಂದರ್ಭದಲ್ಲಿ ಸಂಸದರು ಮತ್ತು ಶಾಸಕರು ತಮ್ಮ ನಿವಾಸಗಳಲ್ಲಿ ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಯಾವ ಪ್ರಕರಣದಲ್ಲಿ ಸಂಸದರು ಮತ್ತು ಶಾಸಕರ ಮನೆಗಳ ಮೇಲೆ ದಾಳಿ ನಡೆದಿದೆ ಎಂಬುದು ಖಚಿತವಾಗಿಲ್ಲ. ಆದರೆ, ನಾಗೇಂದ್ರ ಆಪ್ತ ಗೋವರ್ಧನ್ ರೆಡ್ಡಿ ಮನೆ ಮೇಲೆ ದಾಳಿ ನಡೆದಿರುವುದರಿಂದ ಇದು ವಾಲ್ಮೀಕಿ ನಿಗಮದ ಹಗರಣದ ತನಿಖೆಯ ಭಾಗವಾಗಿದೆ.

ಲೋಕಸಭಾ ಚುನಾವಣೆಯಲ್ಲಿ ಮತದಾರರಿಗೆ ಹಣ ಹಂಚಿಕೆ..

ಲೋಕಸಭಾ ಚುನಾವಣೆಯಲ್ಲಿ ಮತದಾರರಿಗೆ ಹಣ ನೀಡಲು ನಿಗಮದ ಹಣವನ್ನು ಬಳಸಲಾಗಿದೆ ಎಂಬ ಆರೋಪವಿದ್ದು, ಸುಮಾರು ೨೦ ಕೋಟಿ ರೂಪಾಯಿ ಹಣವನ್ನು ಬಳ್ಳಾರಿ ನಗರ, ಬಳ್ಳಾರಿ ಗ್ರಾಮಾಂತರ, ಸಂಡೂರು, ಕಂಪ್ಲಿ ಮತ್ತು ಕೂಡ್ಲಿಗಿ ವಿಧಾನಸಭಾ ಕ್ಷೇತ್ರಗಳಲ್ಲಿ ಹಂಚಿರುವ ಆರೋಪವೂ ಇದೆ.

ಇಂದು ಬೆಳಗಿನ ಜಾವ ೪ರಿಂದ ೫ ಗಂಟೆಯ ಸುಮಾರಿಗೆ ಸಂಸದ ಇ.ತುಕಾರಾಮ್, ಮಾಜಿ ಶಾಸಕ ನಾಗೇಂದ್ರ ಮತ್ತು ಅವರ ಆಪ್ತ ಕಾರ್ಯದರ್ಶಿ ಗೋವರ್ಧನ್, ಶಾಸಕ ಭರತ್ ರೆಡ್ಡಿ, ಎನ್.ಟಿ.ಶ್ರೀನಿವಾಸ್ ಮತ್ತು ಕಂಪ್ಲಿ ಗಣೇಶ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ, ಹಲವು ದಾಖಲೆಗಳು ಹಾಗೂ ಲ್ಯಾಪ್‌ಟಾಪ್, ಮೊಬೈಲ್, ಬ್ಯಾಂಕ್ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಎಂಟು ತಂಡಗಳಲ್ಲಿ ಆಗಮಿಸಿದ ಅಧಿಕಾರಿಗಳು..

ಎಂಟು ತಂಡಗಳಲ್ಲಿ ಇಡಿ ಅಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದಾರೆ. ಶಾಸಕರು ಹಾಗೂ ಸಂಸದರ ನಿವಾಸ ಹಾಗೂ ಗೃಹ ಕಚೇರಿಗಳಲ್ಲಿ ಶೋಧ ಕಾರ್ಯ ಮುಂದುವರೆದಿದೆ. ಬಳ್ಳಾರಿ ಗ್ರಾಮಾಂತರ, ಕಂಪ್ಲಿ, ಕೂಡ್ಲಿಗಿ, ಸಂಡೂರು ಕ್ಷೇತ್ರಗಳಲ್ಲಿ ವಾಲ್ಮೀಕಿ ಹಗರಣದ ಹಣ ಹಂಚಿಕೆ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಪ್ರತಿ ಮತದಾರರಿಗೆ ಶಾಸಕರ ಮೂಲಕ ಮತದಾರರಿಗೆ ಇನ್ನೂರು ರೂಪಾಯಿಯಂತೆ ಹಣ ಹಂಚಿಕೆ ಮಾಡಲಾಗಿದೆ. ಪ್ರಮುಖ ಪಾತ್ರದಲ್ಲಿ ಮಾಜಿ ಸಚಿವ ನಾಗೇಂದ್ರ ಅವರಿದ್ದು, ಶಾಸಕ ಮತ್ತು ಸಂಸದರು ಈ ವಹಿವಾಟಿನಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪವಿದೆ.

ಇಡಿ ವಶಕ್ಕೆ ಸಂಸದ ಇ.ತುಕಾರಾಂ..

ಇನ್ನೂ ಬಳ್ಳಾರಿ ಚುನಾವಣೆಗೆ ಸಂಬAಧಿಸಿದAತೆ ೨೧ ಕೋಟಿ ರೂಪಾಯಿಗಳನ್ನು ಅಕ್ರಮವಾಗಿ ಹಂಚಿರುವ ಆರೋಪದಲ್ಲಿ ಸಂಸದ ಇ. ತುಕಾರಾಂ ಅವರನ್ನು ಇ.ಡಿ. ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

- Advertisement -

Latest Posts

Don't Miss