ಮಂಡ್ಯ: ಮಂಡ್ಯ ಜಿಲ್ಲೆಯ ಕೆರೆ ಕಟ್ಟೆಗಳನ್ನು ತುಂಬಿಸಿ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವವನ್ನು ನಿವಾರಿಸುವಂತೆ ಕಳೆದ 6 ದಿನಗಳಿಂದ ನಡೆಯುತ್ತಿರುವ ಕಾವೇರಿ ಮುಷ್ಕರಕ್ಕೆ ಸಂಸದೆ ಸುಮಲತಾ ಬೆಂಬಲ ನೀಡಿದ್ದಾರೆ.
ಈ ಹೋರಾಟದ ಬಗ್ಗೆ ಇದೀಗ ಟ್ವೀಟ್ ಮಾಡಿರೋ ಸಂಸದೆ ಸುಮಲತಾ, ಕೆಆರ್ ಎಸ್ ಮತ್ತು ಹೇಮಾವತಿ ನದಿ ಅಚ್ಚುಕಟ್ಟು ವ್ಯಾಪ್ತಿಯ ಎಲ್ಲಾ ನಾಲೆಗಳಿಗೂ ನೀರು ಹರಿಸುವಂತೆ ಹಾಗೂ ಜಿಲ್ಲೆಯ ಎಲ್ಲಾ ಕೆರೆ ಕಟ್ಟೆಗಳನ್ನು ತುಂಬಿಸೋ ಸಲುವಾಗಿ ರೈತ ಮುಖಂಡ ಶಂಭೋನಹಳ್ಳಿ ಸುರೇಶ್ ಅಧ್ಯಕ್ಷತೆಯಲ್ಲಿ ಕಳೆದ 6 ದಿನಗಳಿಂದ ಹೋರಾಟ ನಡೆಯುತ್ತಿದ್ದು ಇದಕ್ಕೆ ನನ್ನ ಬೆಂಬಲ ಇದೆ ಅಂತ ಸಂಸದೆ ಸುಮಲತಾ ಹೇಳಿದ್ದಾರೆ. ಅಲ್ಲದೆ ಈ ವಿಚಾರವಾಗಿ ಈಗಾಗಲೇ ಪ್ರಧಾನ ಮಂತ್ರಿಗಳು ಹಾಗೂ ಕೇಂದ್ರ ಸಚಿವರ ಗಮನಕ್ಕೆ ತಂದು ತಕ್ಷಣವೇ ನೀರು ಹರಿಸೋದಕ್ಕೆ ಒತ್ತಡ ಹೇರಿದ್ದೇನೆ ಎಂದಿದ್ದಾರೆ. ಅಲ್ಲದೆ ಈ ಹೋರಾಟವನ್ನು ಬೆಂಬಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಗೆ ಸುಮಲತಾ ಅಂಬರೀಶ್ ಮನವಿ ಮಾಡಿದ್ದಾರೆ.