ಬೆಂಗಳೂರು: ಸಂಸದೆ ಸುಮಲತಾ ಇವತ್ತು ದಿಢೀರನೆ ಬೆಂಗಳೂರಿನ ಬಿಜೆಪಿ ಪ್ರಧಾನ ಕಚೇರಿಗೆ ಭೇಟಿ ನೀಡಿದ್ರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬೆಂಬಲಕ್ಕೆ ಧನ್ಯವಾದ ಹೇಳಲು ಸುಮಲತಾ ಬಂದಿದ್ದರು.
ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಪಕ್ಷೇತರ ಅಭ್ಯರ್ಥಿ ಸುಮಲತಾಗೆ ಬೆಂಬಲ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಸಂಸದೆ ಸುಮಲತಾ ಬೆಂಗಳೂರಿನ ಮಲ್ಲೇಶ್ವರಂನಲ್ಲಿರೋ ಬಿಜೆಪಿ ಪ್ರಧಾನ ಕಚೇರಿಗೆ ಆಗಮಿಸಿ ಧನ್ಯಾವಾದ ಹೇಳಿದ್ರು. ಬಳಿಕ ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್, ಮಹಿಳಾ ಮೋರ್ಛಾ ರಾಜ್ಯಾಧ್ಯಕ್ಷೆ ಭಾರತಿ ಶೆಟ್ಟಿ ಮತ್ತು ಯುವ ಮೋರ್ಛಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಜೊತೆ ಸುಮಲತಾ ಕೆಲ ಕಾಲ ಚರ್ಚೆ ನೆಡಿಸಿದ್ರು.
ಒಂದು ವೇಳೆ ಸುಮಲತಾ ಬಿಜೆಪಿ ಸೇರ್ಪಡೆಯಾಗೋದಕ್ಕೆ ಮುನ್ನುಡಿ ಬರೆಯುತ್ತಿದ್ದಾರಾ ಅನ್ನೋ ಪ್ರಶ್ನೆ ಸಹಜವಾಗಿಯೇ ಮೂಡಿಬಂದಿದೆ. ಆದ್ರೆ ಈ ಬಗ್ಗೆ ಪ್ರತಿಕ್ರಿಯಿಸಿರೋ ಸಂಸದೆ ಸುಮಲತಾ ಮಂಡ್ಯ ಜನರ ಅಭಿಪ್ರಾಯ ಪಡೆದು ಈ ಬಗ್ಗೆ ತೀರ್ಮಾನ ಮಾಡ್ತೀನಿ. ಒಂದೊಂದು ತಾಲೂಕಿಗೂ ಹೋಗಿ ಈ ಬಗ್ಗೆ ಜನರ ಅಭಿಪ್ರಾಯ ತೆಗೆದುಕೊಂಡು ಮುಂದುವರಿಯುತ್ತೇನೆ ಅಂತ ಎಂದಿನಂತೆ ಪ್ರತಿಕ್ರಿಯಿಸಿದ್ದಾರೆ.
ಶುದ್ಧ ಕುಡಿಯೋ ನೀರಿನ ಬೆಲೆ ಏರಿಸಲಿದೆಯಾ ಸರ್ಕಾರ…??? ಮಿಸ್ ಮಾಡದೇ ಈ ವಿಡಿಯೋ ನೋಡಿ