Sunday, December 22, 2024

Latest Posts

ನೀರಿನ ಸಮಸ್ಯೆ ಪರಿಹರಿಸಲು BWSSB ಚೇರ್ಮನ್‌ರನ್ನು ಭೇಟಿಯಾಗಿ ಸಲಹೆ ನೀಡಿದ ಸಂಸದ ತೇಜಸ್ವಿ ಸೂರ್ಯ

- Advertisement -

Political News: ಬೆಂಗಳೂರಿನಲ್ಲಿ ಆಗುತ್ತಿರುವ ನೀರಿನ ಸಮಸ್ಯೆ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ನೀರಿನ ಸಮಸ್ಯೆ ಕುರಿತು ತೇಜಸ್ವಿ ಸೂರ್ಯ ಇಂದು BWSSB ಚೇರ್ಮನ್ ರನ್ನು ಭೇಟಿಯಾಗಿ ಚರ್ಚಿಸಿದ್ದಾರೆ.

ಬೆಂಗಳೂರು ನಗರದಲ್ಲಿ ಪ್ರಸ್ತುತ ಉದ್ಭವವಾಗಿರುವ ನೀರಿನ ಸಮಸ್ಯೆ ಕುರಿತು ಇಂದು BWSSB ಚೇರ್ಮನ್ ರನ್ನು ಭೇಟಿಯಾಗಿ ಚರ್ಚಿಸಿದೆ. ಬೆಂಗಳೂರು ನಗರಕ್ಕೆ ನೀರಿನ ಸಮಸ್ಯೆ ಉದ್ಭವವಾಗಬಹುದು ಎಂಬ ಮುನ್ಸೂಚನೆಯ ಅರಿವು ಇದ್ದರೂ ಕೂಡ ರಾಜ್ಯ ಸರ್ಕಾರವು ಬೇಜವಾಬ್ದಾರಿತನದಿಂದ ವರ್ತಿಸಿರುವ ಪರಿಣಾಮ ಬೆಂಗಳೂರಿನ ಜನತೆ ಇಂದು ಸಂಕಟಪಡುವ ಸ್ಥಿತಿ ಬಂದಿದೆ. ಬೆಂಗಳೂರು ನಗರದ ಬಹುತೇಕ ಭಾಗಗಳು ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದು, ಇಂತಹ ಸಂದರ್ಭದಲ್ಲಿ ಸರ್ಕಾರ ಅವೈಜ್ಞಾನಿಕ ತೀರ್ಮಾನ ತೆಗೆದುಕೊಳ್ಳುವುದನ್ನು ನಿಲ್ಲಿಸಬೇಕಿದೆ.

ಈ ಕುರಿತಾದ ಕೆಲ ಸಲಹೆಗಳನ್ನು ನಾನು BWSSB ಗೆ ನೀಡಿದ್ದೇನೆ.

1) ಕೈಗಾರಿಕೆಗಳು, ಕಟ್ಟಡ ನಿರ್ಮಾಣಕ್ಕೆ ಕುಡಿಯಲು ಯೋಗ್ಯವಲ್ಲದ ನೀರನ್ನು ಬಳಸಬೇಕು.

2) ಕುಡಿಯುವ ನೀರನ್ನು ಎಲ್ಲೆಲ್ಲಿ ತೊಂದರೆ ಇದೆಯೋ ಅಲ್ಲಿಗೆ ಸರಬರಾಜು ಮಾಡಬೇಕು.

3) ಸಂಸ್ಕರಣೆಯ ನೀರಿನ ಪ್ರಮಾಣ 1300 MLD ರಷ್ಟು ಇದ್ದು, ಇದನ್ನು ನೀರಿನ ಮರುಪೂರಣ ಜಾಲಕ್ಕೆ ಬಳಸಬಹುದಾಗಿದೆ.

4) ಭೂ ವಿಜ್ಞಾನಿಗಳ ಸಲಹೆ ಮೇರೆಗೆ ಎಲ್ಲೆಲ್ಲಿ ಸಾಧ್ಯವೋ ಅಲ್ಲೆಲ್ಲ ಬೋರ್ ವೆಲ್ ಕೊರೆಸಿ, ನೀರಿನ ವ್ಯವಸ್ಥೆ ಕಲ್ಪಿಸಬೇಕು.

5) ಕಳೆದ ಕೆಲ ತಿಂಗಳುಗಳಿಂದ ನಿಷ್ಕ್ರಿಯ ಸ್ಥಿತಿಯಲ್ಲಿರುವ ಬೋರ್ ವೆಲ್ ಗಳನ್ನು ಗುರುತಿಸಿ, ಅವುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಕೊರೆಯಿಸಬೇಕಿದೆ.

6) ಪ್ರಸ್ತುತ ಚಾಲ್ತಿಯಲ್ಲಿರುವ ಟ್ಯಾಂಕರ್ ವ್ಯವಸ್ಥೆಯನ್ನು ಮುಂದುವರೆಸುವುದು.

7) ಕಾವೇರಿ 5ನೇ ಹಂತದ ಕಾಮಗಾರಿಯನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಿ, ನಿಗದಿತ ಸ್ಥಳಗಳಲ್ಲಿ ಬೆಂಗಳೂರಿನ ನೀರಿನ ಸಮಸ್ಯೆಗೆ ಪರಿಹಾರ ಕಲ್ಪಿಸುವುದು.

ಇವೆಲ್ಲ ಪರಿಹಾರಗಳನ್ನು ಒಂದು ವಾರದಲ್ಲಿ ಬಗೆಹರಿಸಲು ಮನವಿ ಸಲ್ಲಿಸಲಾಗಿದ್ದು, ಇಲ್ಲದಿದ್ದಲ್ಲಿ ವಿಧಾನಸೌಧದ ಮುಂದೆ ಬೆಂಗಳೂರಿನ ಜನತೆಯ ಪರವಾಗಿ ಧರಣಿ ನಡೆಸುವುದಾಗಿ ತಿಳಿಸಿದ್ದೇನೆ.

ಈ ತಿಂಗಳು ಕಳೆದ ಮೇಲೆ‌ ಶೆಟ್ಟರ್ ಅವರಿಂದ ಪಶ್ಚಾತಾಪದ ಹೇಳಿಕೆ ಹೊರಬರಲಿದೆ ಕಾದು‌ನೋಡಿ: ಡಿಸಿಎಂ ಡಿಕೆಶಿ

ಯಡಿಯೂರಪ್ಪ, ಶೆಟ್ಟರ್, ಬೊಮ್ಮಾಯಿ ಕಾಲದಲ್ಲಿ ಬಾಂಬ್ ಬ್ಲಾಸ್ಟ್ ಆಗಿಲ್ಲವೇ..?: ಸಂತೋಷ್ ಲಾಡ್ ಪ್ರಶ್ನೆ

ಬಿಜೆಪಿ ಅವರು ದ್ವೇಷ ಪ್ರೇಮಿಗಳು, ನಾವು ದೇಶ ಪ್ರೇಮಿಗಳು: ಸಚಿವ ರಾಮಲಿಂಗಾರೆಡ್ಡಿ

- Advertisement -

Latest Posts

Don't Miss