Political News: ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಮತ್ತು ಸಂಸದ ತೇಜಸ್ವಿ ಸೂರ್ಯ ಮದುವೆ ಫಿಕ್ಸ್ ಆಗಿರೋದು ಎಲ್ಲರಿಗೂ ಗೊತ್ತೇ ಇದೆ. ಇದೀಗ ಇವರಿಬ್ಬರ ಮದುವೆ ಡೇಟ್ ಫಿಕ್ಸ್ ಆಗಿದ್ದು, ಮಾರ್ಚ್ 5 ಮತ್ತು 6ರಂದು ಇವರಿಬ್ಬರು ಹಸೆಮಣೆ ಏರಲಿದ್ದಾರೆ.
ಕನಕಪುರ ರಸ್ತೆಯಲ್ಲಿರುವ ಖಾಸಗಿ ರೆಸಾರ್ಟ್‌ನಲ್ಲಿ ತೇಜಸ್ವಿ ಮತ್ತು ಶಿವಶ್ರೀ ವಿವಾಹ ನೆರವೇರಲಿದ್ದು, ಮಾರ್ಚ್ 6ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಿಸೆಪ್ಕ್ಷನ್ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಹಲವು ರಾಜಕೀಯ ಗಣ್ಯರು, ಸಿನಿಮಾ ಸೆಲೆಬ್ರಿಟಿಗಳು ಆಗಮಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಮತ್ತು ಗೃಹಸಚಿವ ಅಮಿತ್ ಶಾ ಕೂಡ ಆಗಮಿಸುವ ಸಾಧ್ಯತೆ ಇದೆ.
2021ರಲ್ಲಿ ಚೆನ್ನೈನಲ್ಲಿ ನಡೆದಿದ್ದ ಸಂಗೀತ ಕಾರ್ಯಕ್ರಮದಲ್ಲಿ ಸಂಸದ ತೇಜಸ್ವಿ ಸೂರ್ಯ, ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಅವರಿಗೆ ಸನ್ಮಾನ ಮಾಡಿದ್ದರು. ಇದು ಅವರ ಮೊದಲ ಭೇಟಿಯಾಗಿತ್ತು. ಬಳಿಕ ಇಬ್ಬರ ಮನೆಯಲ್ಲೂ ಇವರ ಸಂಬಂಧವನ್ನು ಒಪ್ಪಿ ಮದುವೆ ಫಿಕ್ಸ್ ಮಾಡಲಾಯಿತು.
ಶಿವಶ್ರೀ ಸ್ಕಂದ ಪ್ರಸಾದ್ ಗಾಯಕಿಯಾಗಿದ್ದು, ರಾಮ ಮಂದಿರ ಉದ್ಘಾಟನೆ ವೇಳೆ ಪ್ರಧಾನಿ ಮೋದಿಯವರು ಇವರು ಹಾಡಿದ ಪೂಜಿಸಲೆಂದೇ ಹೂಗಳ ತಂದೆ ಹಾಡಿನ ವೀಡಿಯೋವನ್ನು ಟ್ವೀಟರ್‌ನಲ್ಲಿ ಅಪ್ಲೋಡ್ ಮಾಡಿ, ಹೊಗಳಿದ್ದರು.