- Advertisement -
Hubli News: ಹುಬ್ಬಳ್ಳಿ: ಧಾರವಾಡದಲ್ಲಿ ದಿಂಗಾಲೇಶ್ವರ ಶ್ರೀಗಳು ಪಕ್ಷೇತರವಾಗಿ ಸ್ಪರ್ಧಿಸುವುದು ಖಚಿತವಾಗಿದ್ದು, ಇಂದು ಸಂಜೆ ದಿಂಗಾಲೇಶ್ವರ ಶ್ರೀಗಳು ಶಕ್ತಿಪ್ರದರ್ಶನ ಮಾಡಲಿದ್ದಾರೆ.
ಇಂದು ಹುಬ್ಬಳ್ಳಿಯಲ್ಲಿ ದಿಂಗಾಲೇಶ್ವರ ಸ್ವಾಮೀಜಿಗೆ ಸ್ವಾಗತ ಮೆರವಣಿಗೆ ನಡೆಯಲಿದೆ. ಬಿಜೆಪಿಯ ಪ್ರಹ್ಲಾದ್ ಜೋಶಿ ವಿರುದ್ಧ ದಿಂಗಾಲೇಶ್ವರ ಶ್ರೀಗಳು ತೊಡೆತಟ್ಟಿದ್ದು, ಲಿಂಗಾಯತ ಅಸ್ತ್ರದ ಮೂಲಕ ಪ್ರಹ್ಲಾದ್ ಜೋಶಿ ಸೋಲಿಸಲು ಪಣ ತೊಟ್ಟಿದ್ದಾರೆ.
ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಸಾಯಂಕಾಲ 5 ಗಂಟೆಗೆ ಶಕ್ತಿಪ್ರದರ್ಶನ ನಡೆಯಲಿದೆ. ಮೂರು ಸಾವಿರ ಮಠದಿಂದ ಮೆರವಣಿಗೆ ಆರಂಭವಾಗಲಿದ್ದು, ಹತ್ತು ಸಾವಿರಕ್ಕೂ ಹೆಚ್ಚು ಭಕ್ತರು ಸೇರಿ ಭವ್ಯ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಚುನಾವಣೆ ಪ್ರಚಾರದ ವೇಳೆ ಮಹಿಳೆಗೆ ಕಿಸ್ ಕೊಟ್ಟ ಅಭ್ಯರ್ಥಿ: ಫೋಟೋ ವೈರಲ್
- Advertisement -