Wednesday, April 2, 2025

Latest Posts

siddaramaiah :ವೈಟ್ನರ್ ಹಿಂದಿನ ಅಕ್ಷರಗಳೇನು? : ಅಸಲಿ ಸತ್ಯ ಬಿಚ್ಚಿಟ್ಟ ಸಿದ್ದರಾಮಯ್ಯ

- Advertisement -

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಲಾಗಿದೆ. ಮುಡಾಗೆ ಸಿದ್ದರಾಮಯ್ಯ ಅವರ ಪತ್ನಿ ಕೊಟ್ಟಿರುವ ಅರ್ಜಿಯನ್ನು ವೈಟ್ನರ್ ಮೂಲಕ ತಿದ್ದುಪಡಿ ಮಾಡಲಾಗಿದೆ ಎಂದು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಆರೋಪಿಸಿದ್ದರು. ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ಕುರಿತು ಸಿಎಂ ಸ್ಪಷ್ಟನೆ ನೀಡಿದ್ದಾರೆ.

ಟ್ವಿಟರ್​ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿರುವ ಸಿದ್ದರಾಮಯ್ಯ, ವೈಟ್ನರ್ ಹಿಂದೆ ಅಕ್ಷರಗಳೇನು ಅನ್ನೋದನ್ನು ಬಹಿರಂಗಪಡಿಸಿದ್ದಾರೆ. ‘ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ’ ಎಂಬ 4-5 ಪದಗಳಿಗೆ ವೈಟ್ನರ್‌ ಹಾಕಲಾಗಿದೆ. ಪ್ರಾಧಿಕಾರ ಅಭಿವೃದ್ಧಿ ಪಡಿಸಿದ ಸಮಾನಂತರ ಬಡಾವಣೆಯಲ್ಲಿ ನಿವೇಶನ ನೀಡಬೇಕೆಂಬ ಮನವಿ ಮಾಡಲಾಗಿದೆ. ಇದರಲ್ಲಿ ಟಿಪ್ಪಣಿಯೂ ಇಲ್ಲ, ಆದೇಶವೂ ಇಲ್ಲ, ಅಪ್ಪಣೆಯೂ ಇಲ್ಲ. ತನಗೆ ಸೇರಿದ ಭೂಮಿಯಲ್ಲೇ ನಿವೇಶನ ಕೊಡಿ ಎಂಬ ಮನವಿ ಅಷ್ಟೆ ಇದೆ ಎಂದಿದ್ದಾರೆ.

ವೈಟ್ನರ್‌ ಹಚ್ಚಿ ಕಪ್ಪು ಚುಕ್ಕೆ ಅಳಿಸಿಕೊಳ್ಳಲು ಸಾಧ್ಯವಿಲ್ಲ, ಸಿಎಂ ಪತ್ನಿ ನಿವೇಶನ ಕೇಳಿದ್ದು ವಿಜಯನಗರದಲ್ಲಿ. ಮುಡಾ ವಿಚಾರ ಚರ್ಚೆಗೆ ಬಂದ ನಂತರ ಸಿದ್ದರಾಮಯ್ಯ ಅವರ ಪರವಾಗಿ ಯಾರೋ ಹೋಗಿ ವೈಟ್ನರ್‌ ಹಚ್ಚಿ ಬಂದಿದ್ದಾರೆಂದು ಬೊಬ್ಬೆ ಹಾಕುತ್ತಿದ್ದ ಸ್ವಯಂ ಘೋಷಿತ ಕಾನೂನು ಪಂಡಿತರು ಈಗೇನು ಹೇಳುತ್ತಾರೆ? ಎಂದು ಸಿಎಂ ಪ್ರಶ್ನಿಸಿದ್ದಾರೆ.

- Advertisement -

Latest Posts

Don't Miss