Sunday, September 8, 2024

Latest Posts

ಕಾಂಗ್ರೆಸ್ ನಾಯಕ ಮುದ್ದುಹನುಮೇಗೌಡ, ನಟ ಶಶಿಕುಮಾರ್ ಬಿಜೆಪಿಗೆ ಸೇರ್ಪಡೆ

- Advertisement -

ಮಾಜಿ ಸಂಸದ ಮುದ್ದುಹನುಮೇಗೌಡ, ನಟ ಶಶಿಕುಮಾರ್, ನಿವೃತ್ತ ಐಎಎಸ್ ಅನಿಲ್ ಕುಮಾರ್ ಸೇರಿ ಹಲವು ನಾಯಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ರಾಜ್ಯ ಘಟಕದ ಕಚೇರಿಯಲ್ಲಿ ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್  ಕಟೀಲ್ ಸಮ್ಮುಖದಲ್ಲಿ ಸೇರ್ಪಡೆಯಾದರು. ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಎಲ್ಲರೂ ಬಿಜೆಪಿಯತ್ತ ಆಕರ್ಷಿತರಾಗುತ್ತಿದ್ದಾರೆ. ಪಕ್ಷವನ್ನು ಸೇರಿದ ಎಲ್ಲರನ್ನೂ ಸಮಾನ ಪ್ರೀತಿ, ವಿಶ್ವಾಸ ಮತ್ತು ಗೌರವದಿಂದ ನೋಡಿಕೊಳ್ಳುತ್ತೇವೆ ಎಂದು ಹೇಳಿದರು.

ನಟ ಶಶಿಕುಮಾರ್ ಮಾತನಾಡಿ, ಪ್ರಧಾನಿಯವರ ಕಾರ್ಯವೈಖರಿ ಮೆಚ್ಚಿ ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ ಚಳ್ಳಕೇರೆಯಿಂದ ಸ್ಪರ್ಧಿಸುವ ವಿಚಾರದಲ್ಲಿ ಪಕ್ಷದ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಎಂದರು. ಮಾಜಿ ಸಂಸದ ಮುದ್ದುಹನುಮೇಗೌಡ ಮಾತನಾಡಿ, ಹಿಂದೆ ಸಂಸದನಾಗಿ ಪ್ರಧಾನಿ ಮೋದಿಯವರ ಕೆಲಸಗಳನ್ನು ಹತ್ತಿರದಿಂದ ನೋಡಿದ್ದೇನೆ. ಸದಾ ದೇಶದ ಅಭಿವೃದ್ಧಿಗೆ ಚಿಂತನೆ ನಡೆಸುವ ಅವರು ಪ್ರಧಾನಿ ಹುದ್ದೆಗೆ ಘನತೆ, ಗೌರವ ತಂದಿದ್ದಾರೆ ಎಂದರು.

 

- Advertisement -

Latest Posts

Don't Miss