Thursday, June 13, 2024

Latest Posts

ಟ್ರಾವೆಲ್ ಬ್ಯಾಗ್‌ನಲ್ಲಿ 15 ವರ್ಷದ ಬಾಲಕಿಯ ಶವ…!

- Advertisement -

Mumbai News:

15 ವರ್ಷದ ಬಾಲಕಿಯ ಶವವನ್ನು ಕಂಬಳಿಯಲ್ಲಿ ಸುತ್ತಿ ಟ್ರಾವೆಲ್ ಬ್ಯಾಗ್‌ನಲ್ಲಿ ತುಂಬಿಟ್ಟಿದ್ದ ಘಟನೆ ಮಹಾರಾಷ್ಟ್ರದ ಪಲ್ಘಾರ್ ಜಿಲ್ಲೆಯ ನೈಗಾಂವ್ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ನೈಗಾಂವ್ ರೈಲ್ವೆ ನಿಲ್ದಾಣದಲ್ಲಿ ಹೊಸದಾಗಿ ನಿರ್ಮಿಸಲಾದ ಪೂರ್ವ-ಪಶ್ಚಿಮ ಸೇತುವೆಯ ಬಳಿಯ ಪೊದೆಗಳಲ್ಲಿ ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಾಲಕಿಯಶವವಿರುವ ಬ್ಯಾಗ್ ಪತ್ತೆಯಾಗಿದೆ.

ವಂಶಿತಾ ಕನೈಯಾಲಾಲ್ ರಾಥೋಡ್ ಎಂಬ 15 ವರ್ಷದ ಬಾಲಕಿ ಗುರುವಾರ ಮಧ್ಯಾಹ್ನದಿಂದ ಅಂಧೇರಿಯಲ್ಲಿರುವ ತನ್ನ ಮನೆಯಿಂದ ನಾಪತ್ತೆಯಾಗಿದ್ದಳು. ಗುರುವಾರ ಬೆಳಗ್ಗೆ ಶಾಲೆಗೆ ತೆರಳಿದ್ದ ಆಕೆ ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಹೀಗಾಗಿ, ಆಕೆಯ ಪೋಷಕರು ಹುಡುಕಾಡಿದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಆಕೆ ಕಾಣೆಯಾಗಿದ್ದಾಳೆ ಎಂದು ಪೊಲೀಸ್ ಕಂಪ್ಲೇಂಟ್ ನೀಡಿದ್ದರು. ಅವರ ದೂರಿನ ಆಧಾರದ ಮೇಲೆ ಅಂಧೇರಿ ಪೊಲೀಸರು  ಪ್ರಕರಣವನ್ನು ದಾಖಲಿಸಿಕೊಂಡಿದ್ದರು.

ಅದಾದ ಬಳಿಕ ಆ ಬಾಲಕಿಯ ಮೃತದೇಹವು ಸೂಟ್​ಕೇಸ್​​ನಲ್ಲಿ ಪತ್ತೆಯಾಗಿದ್ದು, ಆ ಶವದ ಮೇಲೆ ಅನೇಕ ಇರಿತದ ಗಾಯಗಳಾಗಿತ್ತು. ಆ ಶವವನ್ನು ವಸೈನಲ್ಲಿರುವ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಪೊಲೀಸರು ಇದೀಗ ಅಂಧೇರಿಯಿಂದ ನೈಗಾಂವ್ ನಿಲ್ದಾಣದವರೆಗಿನ ರೈಲ್ವೆ ನಿಲ್ದಾಣಗಳಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ ರೆಕಾರ್ಡಿಂಗ್‌ಗಳನ್ನು ಪರಿಶೀಲಿಸುವ ಮೂಲಕ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

ಗುಲಾಂ ನಬಿ ಆಜಾದ್ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಿಗ್ಗಾಮುಗ್ಗಾ ವಾಗ್ಧಾಳಿ

ಪ್ರಧಾನಿ ಭೇಟಿಯಾದ ಬಿಎಸ್ ವೈ: ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರುವಂತೆ ಮೋದಿ ಸಲಹೆ

 

ಈದ್ಗಾ ಮೈದಾನದ ಮಾಲೀಕತ್ವ ಕುರಿತ ಹೈಕೋರ್ಟ್ ಮಧ್ಯಂತರ ಆದೇಶ: ಸಿಎಂ ಬೊಮ್ಮಾಯಿ ಹೇಳಿದ್ದೇನು ಗೊತ್ತಾ.?

- Advertisement -

Latest Posts

Don't Miss