Thursday, December 12, 2024

Latest Posts

ಕೊನೆಗೂ ಶಾರುಖ್ ಪುತ್ರನಿಗೆ ಬಿಡುಗಡೆ ಭಾಗ್ಯ..!

- Advertisement -

www.karnatakatv.net: ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ ಇಂದು ಪೂರ್ಣಗೊಂಡಿದ್ದು ಆರ್ಯನ್ ಗೆ ಜಾಮೀನು ಸಿಕ್ಕಿದೆ.

ಎನ್‌ಸಿಬಿ ಪರ ಎಎಸ್‌ಜಿ ಅನಿಲ್ ಸಿಂಗ್ ವಾದಮಂಡನೆ ಮಾಡಿದ್ದು, ಆರ್ಯನ್ ಗೆ ಜಾಮೀನು ನೀಡಬಾರದು ಎಂದು ವಾದಿಸಿದರು. ‘ಡ್ರಗ್ಸ್ ಸೇವಿಸಿರುವುದನ್ನು ಅರ್ಬಾಜ್ ಒಪ್ಪಿಕೊಂಡಿದ್ದಾನೆ. ಆರ್ಯನ್ ಖಾನ್ ಡ್ರಗ್ಸ್ ದಂಧೆಯ ಬಗ್ಗೆ ದಾಖಲೆ ಇದೆ. ಕ್ರೂಸ್‌ನಲ್ಲಿ ಡ್ರಗ್ಸ್ ಪಾರ್ಟಿ ಬಗ್ಗೆ ಆರ್ಯನ್‌ಗೆ ಮಾಹಿತಿಯಿತ್ತು. ಆರ್ಯನ್ ವಾಟ್ಸಾಪ್ ಚಾಟ್‌ನಿಂದ ವಾಣಿಜ್ಯ ಉದ್ದೇಶಕ್ಕೆ ಡ್ರಗ್ಸ್ ಇಟ್ಟುಕೊಂಡಿದ್ದರು ಎಂಬುದು ಪತ್ತೆ ಆಗಿದೆ. ಕ್ರೂಸ್‌ನಲ್ಲಿ ಹಲವು ಮಾದರಿಯ ಡ್ರಗ್ಸ್ ಪತ್ತೆಯಾಗಿದೆ. ಇದು ನರಹತ್ಯೆಗಿಂತ ಘೋರ ಅಪರಾಧವಾಗಿದೆ’ ಎಂದು ವಾದಿಸಿದರು ಅವರು.

ಆರ್ಯನ್ ಪರ ವಾದ ಮಂಡನೆ ವಕೀಲ ಮುಕುಲ್ ರೋಹ್ಟಗಿ. ‘ಆರ್ಯನ್ ಖಾನ್ ಬಂಧನಕ್ಕೆ ಸೂಕ್ತ ಕಾರಣ ನೀಡಿಲ್ಲ. ಸೂಕ್ತ ಕಾರಣ ನೀಡದೇ ಬಂಧಿಸಲಾಗಿದೆ. ಬಂಧನಕ್ಕೂ ಮುನ್ನ ಸೂಕ್ತ ಕಾರಣ ತಿಳಿಸಬೇಕಿತ್ತು. ಯಾವ ಕಾರಣಕ್ಕೆ ಬಂಧನವೆoದು ತಿಳಿದುಕೊಳ್ಳುವ ಹಕ್ಕಿದೆ. ಬಂಧನಕ್ಕೆ ಸೂಕ್ತ ಕಾರಣ ನೀಡದೆ ಎನ್‌ಸಿಬಿ ದಾರಿ ತಪ್ಪಿಸಿದೆ’ ಎಂದು ಮುಕುಲ್ ರೋಹ್ಟಗಿ ಕೋರ್ಟ್ ಗೆ ತಿಳಿಸಿದ್ದರು.

‘ಅರ್ಬಾಜ್ ಡ್ರಗ್ಸ್ ತರುತ್ತಿರುವುದು ಆರ್ಯನ್‌ಗೆ ಗೊತ್ತಿತ್ತ. ಪ್ರಯಾಣ ವೇಳೆ ಇವರು ಡ್ರಗ್ಸ್ ಸೇವಿಸಲು ಪ್ಲಾನ್ ಮಾಡಿದ್ರು. ಎನ್‌ಡಿಪಿಎಸ್ ಪ್ರಕರಣಗಳಲ್ಲಿ ಜಾಮೀನು ಕೊಡಬೇಕೆಂದಿಲ್ಲ. ಮೇಲ್ನೋಟಕ್ಕೆ ಪ್ರಕರಣ ಕಂಡುಬoದರೂ ನಿರಾಕರಿಸಬಹುದು. ಆರ್ಯನ್, ಅರ್ಬಾಜ್ ಮರ್ಚೆಂಟ್ ಬಾಲ್ಯದ ಸ್ನೇಹಿತರು. ಇಬ್ಬರೂ ಒಟ್ಟಿಗೆ ತೆರಳುತ್ತಿದ್ರು, ಒಂದೇ ಕೊಠಡಿಯಲ್ಲಿರುತ್ತಿದ್ದರು. ಡ್ರಗ್ಸ್ ಸೇವನೆ ಬಗ್ಗೆ ಪರೀಕ್ಷೆ ಮಾಡಿಲ್ಲವೆಂದು ಹೇಳುತ್ತಿದ್ದಾರೆ. ಅವರು ಡ್ರಗ್ಸ್ ಸೇವಿಸಿಲ್ಲ ಅಂದ್ರೆ ಪರೀಕ್ಷೆ ನಡೆಸುವುದು ಏಕೆ ಆರೋಪಿಗಳ ಬಳಿ ಅಪಾರ ಪ್ರಮಾಣದಲ್ಲಿ ಡ್ರಗ್ಸ್ ಸಿಕ್ಕಿತ್ತು’ ಎಂದರು ಹೇಳಿದರು.

- Advertisement -

Latest Posts

Don't Miss