Hubli News: ಹುಬ್ಬಳ್ಳಿ: ಕೆಲದಿನಗಳ ಹಿಂದೆ ಪ್ರೀತಿಗೆ ಸಹಕರಿಸಲಿಲ್ಲ ಎಂದು ಯುವಕನಿಂದ ಕೊಲೆಯಾದ ಯುವತಿ ಅಂಜಲಿ ಅಂಬಿಗೇರ ಸಹೋದರಿ ಯಶೋಧ ಅಕ್ಕನ ಸಾವಿನಿಂದ ಮನನೊಂದು ಪಿನಾಯಲ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕೂಡಲೆ ಅವರನ್ನು ಹುಬ್ಬಳ್ಳಿಯ ಕಿಮ್ಸ್ (KIMS) ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಯಶೋಧ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ ನಿನ್ನೆ ಅಂಬಿಗರ ಚೌಡಯ್ಯ ಪೀಠದ ಶ್ರೀ ಶಾಂತಭೀಷ್ಮ ಸ್ವಾಮೀಜಿ, ದಿಂಗಾಲೇಶ್ವರ ಶ್ರೀ, ಮನಸೂರಿನ ಬಸವರಾಜ ದೇವರು ಶ್ರೀ ಸೇರಿದಂತೆ ವಿವಿಧ ಮಠಾಧೀಶರು ಮತ್ತು ಸಾರ್ವಜನಿಕರು ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಯಲ್ಲಿ ಯಶೋಧ ಕೂಡ ಭಾಗಿಯಾಗಿದ್ದಳು. ಪ್ರತಿಭಟನೆ ವೇಳೆ ಯಶೋಧ ಪ್ರಜ್ಞೆ ತಪ್ಪಿ ಬಿದ್ದಿದ್ದರು.ಕೂಡಲೆ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿತ್ತು. ಮನೆಗೆ ಹೋದ ಯಶೋಧ ರಾತ್ರಿ ಪಿನಾಯಲ್ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ.
ಅಹಿತಕರ ಘಟನೆಗಳು ನಡೆದಾಗ ತಕ್ಷಣಕ್ಕೆ ಕಡಿವಾಣ ಹಾಕೋದು ಪೋಲಿಸರ ಕರ್ತವ್ಯ: ಸಚಿವ ಸಂತೋಷ್ ಲಾಡ್
ಈ ಕರಾಳ ದಂಧೆಯ ಬಗ್ಗೆ ಕಾಂಗ್ರೆಸ್ ನಿರ್ಲಕ್ಷ್ಯ ತೋರುತ್ತಿರುವುದೇಕೆ..?: ಸುಮಲತಾ ಅಂಬರೀಷ್
ದೇವರಾಜೇಗೌಡನ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ: ಸಚಿವ ಚಲುವರಾಯಸ್ವಾಮಿ