Tuesday, August 5, 2025

Latest Posts

ಮುರುಘಾ ಮಠ ಶಿವಮೂರ್ತಿ ಶ್ರೀಗಳು ಅರೆಸ್ಟ್…!

- Advertisement -

Chithradurga News:

ಮುರುಘಾ ಮಠದ ಶಿವಮೂರ್ತಿ ಶ್ರೀಗಳನ್ನು ಗುರುವಾರ ರಾತ್ರಿ ಬಂಧಿಸಲಾಗಿದೆ. ಪೊಲೀಸರು ಶ್ರೀಗಳನ್ನು ಬಂಧಿಸಿ ಠಾಣೆಗೆ ಕರೆದೊಯ್ಯುತ್ತಿದ್ದಾರೆ. ಮುರುಘಾ ಮಠದಲ್ಲೇ ಶಿವಮೂರ್ತಿ ಶ್ರೀಗಳ ಬಂಧನ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಪೋಕ್ಸೋ ಪ್ರಕರಣ ದಾಖಲಾಗಿ ಏಳು ದಿನಗಳ ಬಳಿಕ ಶ್ರೀಗಳನ್ನು ಬಂಧಿಸಲಾಗಿದೆ. ಮುರುಘಾ ಶ್ರೀ ಬಂಧನಕ್ಕೆ ಹೆಚ್ಚಿದ ಒತ್ತಡದಿಂದ ಪೊಲೀಸರು ಬಂಧಿಸಿದ್ದು, ಶ್ರೀಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.

ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಚಿತ್ರದುರ್ಗ ಮುರುಘಾ ಮಠದ ಮುರುಘಾ ಶ್ರೀಗಳ ಬಂಧನದ ವೇಳೆ ನಗರದ ಜಿಲ್ಲಾಧಿಕಾರಿ ಕಚೇರಿ ವೃತ್ತ ಬಳಿ ಬ್ಯಾರಿಕೇಡ್‌ ಹಾಕಲಾಗಿದೆ. ಜೊತೆಗೆ ನಗರದ ಹಲವು ಕಡೆಗಳಲ್ಲಿಯೂ ಬಿಗಿ ಪೊಲೀಸ್ ಬಂದೋಬಸ್ತ್‌ ಮಾಡಲಾಗಿದೆ.

ಇದರ ಜೊತೆಗೆ ಭದ್ರತೆಗಾಗಿ ಹೆಚ್ಚಿನ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಮುರುಘಾ ಶರಣರು ಲೈಂಗಿಕ ದೌರ್ಜನ್ಯ ಆರೋಪ, ಪೋಕ್ಸೊ ಹಾಗೂ ಸುಮೋಟೋ ಪ್ರಕರಣಗಳನ್ನು ಎದುರಿಸುತ್ತಿದ್ದು, ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜಿಲ್ಲಾ ನ್ಯಾಯಾಲಯ ಶುಕ್ರವಾರಕ್ಕೆ ಮುಂದೂಡಿದೆ ಎನ್ನಲಾಗಿದೆ.

ಬಸವರಾಜ್ ದಂಪತಿಗೆ ಜಾಮೀನು ಮಂಜೂರು ಮಾಡಿದ ಕೋರ್ಟ್

ಬೆಂಗಳೂರು: ಕ್ಷೇಮವನ ಉದ್ಘಾಟಿಸಿದ ಯೋಗಿ ಆದಿತ್ಯನಾಥ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಭೇಟಿಯಾದ ಮಾಜಿ ಸಂಸದ ಮುದ್ದಹನುಮೇಗೌಡ

- Advertisement -

Latest Posts

Don't Miss