ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಬಾಲಿವುಡ್ ಗಾಯಕ, ನಟ ಲಕ್ಕಿ ಅಲಿ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಬೆಂಗಳೂರಿನ ನ್ಯೂ ಯಲಹಂಕ ಟೌನ್ ಬಳಿ ಇರುವ ಟ್ರಸ್ಟ್ ಒಂದಕ್ಕೆ ಸೇರಿರುವ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಲಕ್ಕಿ ಅಲಿ ಆರೋಪ ಮಾಡಿದ್ದಾರೆ. ಈ ಸಂಬಂಧ ಲೋಕಾಯುಕ್ತದಲ್ಲಿ ಗಾಯಕ ಲಕ್ಕಿ ಅಲಿ ದೂರು ದಾಖಲಿಸಿದ್ದಾರೆ.
ರೋಹಿಣಿ ಸಿಂಧೂರು ಅವರು ಕೆಂಚೇನಹಳ್ಳಿ ಬಳಿ ಇರುವ ತನ್ನ ಆಸ್ತಿಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಎಸಿಪಿಯವರಿಗೆ ದೂರು ನೀಡಿದ್ರೂ ಯಾವುದೇ ಪ್ರತಿಕ್ರಿಯೆ ಮಾಡಿಲ್ಲ. ಸ್ಥಳೀಯ ಪೊಲೀಸರಿಂದ ನನಗೆ ಯಾವುದೇ ಸಹಾಯ ಸಿಗುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ಈ ಬಗ್ಗೆ ದೂರು ನೀಡಿದ ಅಲಿ X ಖಾತೆಯಲ್ಲಿ ದೂರಿನ ಪ್ರತಿ ಅಪ್ಲೋಡ್ ಮಾಡಿದ್ದಾರೆ. ರೋಹಿಣಿ ಸಿಂಧೂರಿ, ಪತಿ ಸುಧೀರ್ ರೆಡ್ಡಿ, ಭಾಮೈದ ಮಧುಸೂಧನ್ ರೆಡ್ಡಿ ವಿರುದ್ಧ ದೂರು ದಾಖಲು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಈ ಭೂ ಹಗರಣದಲ್ಲಿ ಯಲಹಂಕ ಎಸಿಪಿ ಮಂಜುನಾಥ್, ಸರ್ವೇಯರ್ ಮನೋಹನ್ ಶಾಮೀಲು ಆಗಿರುವ ಆರೋಪ ಮಾಡಿದ್ದಾರೆ. 2022ರಲ್ಲಿ ಲಕ್ಕಿ ಅಲಿ ಈ ಸಂಬಂಧ ಯಲಹಂಕ ನ್ಯೂಟೌನ್ ಠಾಣೆಗೆ ದೂರು ನೀಡಿದ್ರು, ಈಗ ಲೋಕಾಯುಕ್ತಕ್ಕೆ ಕೊಟ್ಟ ದೂರನ್ನ ಡಿಜಿ/ಐಜಿಪಿಗೆ ಟ್ಯಾಗ್ ಮಾಡಿದ್ದಾರೆ.