ಜಿಲ್ಲಾ ಸುದ್ದಿ: ಕ್ರಿಕೆಟ್ ಲೋಕದ ಸ್ಪಿನ್ ದಿಗ್ಗಜ ತನ್ನ ವಿಶಿಷ್ಟವಾದ ಶೈಲಿ ಬೌಲಿಂಗ್‌ನಿಂದ ಖ್ಯಾತ ಬ್ಯಾಟ್ಸ್‌ಮನ್ ಗಳನ್ನು ವಿಕೆಟ್ ಪಡೆದುಕೊಳ್ಳುತ್ತಿದ್ದ ಶ್ರೀಲಂಕಾದ ಮುತ್ತಯ್ಯ ಮುರಳಿಧರ ವಿದ್ಯಾಕಾಶಿ ಧಾರವಾಡದಲ್ಲಿ ಹೂಡಿಕೆ ಮಾಡಲು ಮುಂದಾಗಿದ್ದಾರೆ.
ಸಾಮಾನ್ಯವಾಗಿ ಕ್ರಿಕೆಟರ್‌ಗಳು ವೃತ್ತಿ ಜೀವನಕ್ಕೆ ವಿದಾಯ ಹೇಳಿದ ಮೇಲೆ ಅನೇಕರು ಕೋಚ್ ಇಲ್ಲವೇ ಬೇರೆ ಬೇರೆ ಜವಾಬ್ದಾರಿಗಳನ್ನು ವಹಿಸಿಕೊಂಡು ಕ್ರಿಕೆಟ್ಗಾಗಿಯೇ ಮುಡಿಪಾಗಿ ಬಿಡ್ತಾರೆ. ಆದರೆ ಕೆಲವೇ ಕೆಲವರು ಮಾತ್ರ ಬೇರೆ ಬೇರೆ ಕಡೆ ಹೋಗ್ತಾರ. ಅಂತವರಲ್ಲಿ ಶ್ರೀಲಂಕಾದ ಕ್ರಿಕೆಟ್ ದಿಗ್ಗಜ್ ಮುತ್ತಯ್ಯ ಮುರಳೀಧರನ್ ಸಹ ಒಬ್ಬರು. ಕ್ರಿಕೆಟ್ ಜೀವನಕ್ಕೆ ವಿದಾಯ ಹೇಳಿದ ಬಳಿಕ ಶ್ರೀಲಂಕಾದಲ್ಲಿ ಸಿಲೋನ್ ಬೇವರೆಜಸ್ ಕ್ಯಾನ್ ಕಂಪನಿ ಮೂಲಕ ತಂಪು ಪಾನೀಯ ಮತ್ತು ಎನರ್ಜಿ ಡ್ರಿಂಕ್ ಉತ್ಪಾದನಾ ಉದ್ಯಮಕ್ಕೆ ಕೈ ಹಾಕಿ ಯಶಸ್ವಿಯಾದವರು. ಅವರೇ ಈಗ ಧಾರವಾಡದಲ್ಲಿ ತಮ್ಮದೇ ತಂಪು ಪಾನೀಯ ಉದ್ಯಮ ಆರಂಭಿಸುವುದಕ್ಕೆ ಮುಂದಾಗಿದ್ದಾರೆ.
ಹೌದು, ತಮ್ಮ ಉದ್ಯಮಕ್ಕಾಗಿ ಧಾರವಾಡ ತಾಲೂಕಿನ ಮುಮ್ಮಿಗಟ್ಟಿ ಬಳಿ ಜಮೀನನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಕಳೆದ ವಾರವಷ್ಟೇ ಮುಮ್ಮಿಗಟ್ಟಿಗೆ ಬಂದು ಸ್ಥಳವನ್ನೂ ನೋಡಿಕೊಂಡು ಹೋಗಿದ್ದಾರೆ. ಈ ಕೈಗಾರಿಕೆ ಸ್ಥಾಪನೆಗೆ ಎಫ್ಎಂಸಿಜಿ ಕ್ಲಸ್ಟರ್ ಅಡಿಯಲ್ಲಿ ಸುಮಾರು 900 ಕೋಟಿ ರೂಪಾಯಿಗಳಷ್ಟು ಹೂಡಿಕೆ ಮಾಡಲು ಮುರಳೀಧರನ್ ಸಿದ್ಧರಾಗಿದ್ದು, ಮೊದಲ ಹಂತದಲ್ಲಿ 256.30 ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಮಾಡುತ್ತಿದ್ದಾರೆ ಈ ಮೂಲಕ 200 ಜನರಿಗೆ ಇಲ್ಲಿ ಉದ್ಯೋಗ ಸೃಷ್ಟಿಯಾಗಲಿದೆ.
ಮೊದಲ ಹಂತದಲ್ಲಿ 15 ಎಕರೆ ಭೂಮಿ ಒದಗಿಸಲಾಗುತ್ತಿದ್ದು. ಒಟ್ಟು ಮೂರು ಹಂತಗಳಲ್ಲಿ ಉದ್ಯಮ ವಿಸ್ತರಿಸಲು ಕಂಪೆನಿ ಯೋಜಿಸಿದೆ ಇದಕ್ಕಾಗಿ 32 ರಿಂದ 36 ಎಕರೆ ಭೂಮಿಗೆ ಬೇಡಿಕೆ ಸಲ್ಲಿಸಿದ್ದಾರೆ. ಮುರಳೀಧರನ್ ಕಳೆದ ಆ.5 ರಂದು ಮುಮ್ಮಿಗಟ್ಟಿ ಕೈಗಾರಿಕೆ ಪ್ರದೇಶಕ್ಕೆ ಭೇಟಿ ನೀಡಿ ಜಮೀನು ಪರಿಶೀಲಿಸಿದ್ದಾರೆ ಸರ್ಕಾರದ ಹಂತದಲ್ಲಿ ಉದ್ಯಮ ಆರಂಭಕ್ಕೆ ಅನುಮೋದನೆ ದೊರೆತಿದ್ದು, ಮುಂಬರುವ 2-3 ವರ್ಷದಲ್ಲಿ ಕಾಮಗಾರಿ ಆರಂಭಿಸುವ ಸಾಧ್ಯತೆ ಇದೆ. ಶ್ರೀಲಂಕಾದ ಮಾಜಿ ಕ್ರಿಕೆಟಿಗ್ ಹಾಗೂ ವಿಶ್ವದ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರುಳಿಧರನ್ ಅವರು ಇದೀಗ ಧಾರವಾಡದಲ್ಲಿ ಕೈಗಾರಿಕೆಯೊಂದನ್ನು ಸ್ಥಾಪಿಸುತ್ತಿರುವುದು ಧಾರವಾಡಕ್ಕೆ ಹೆಮ್ಮೆಯ ವಿಷಯವಾಗಿದೆ.
ಒಟ್ಟಾರೆಯಾಗಿ ಉದ್ಯಮ ಕ್ಷೇತ್ರದಲ್ಲಿ ಧಾರವಾಡ ತನ್ನದೆಯಾದ ಛಾಪು ಮೂಡಿಸಿದ್ದು, ಅದೇ ಕಾರಣಕ್ಕೆ ಈಗ ದೂರದ ಶ್ರೀಲಂಕಾದಿಂದ ಮುತ್ತಯ್ಯ ಮುರಳೀಧರ ಧಾರವಾಡಕ್ಕೆ ಬಂದಿದ್ದು, ಧಾರವಾಡ ಈಗ ವಿಶ್ವದ ಭೂಪಟದಲ್ಲಿ ಸ್ಥಾನ ಪಡೆದುಕೊಳ್ಳುವಂತಾಗಿದೆ.
Laxmi Hebbalkar : ಬಸವಣ್ಣನವರ ತತ್ವಗಳನ್ನು ಅಳವಡಿಸಿಕೊಂಡು ಸಿದ್ದರಾಮಯ್ಯ ಸರಕಾರ ನಡೆಸುತ್ತಿದ್ದಾರೆ..!